ಕರ್ನಾಟಕ

karnataka

ETV Bharat / state

ಪ್ರವಾಹ ಪೀಡಿತ ಜಿಲ್ಲೆಗಳ ಶಾಲೆಗಳಲ್ಲಿ ಶನಿವಾರ, ಭಾನುವಾರವೂ ಪಾಠ ಪ್ರವಚನ

ಪ್ರವಾಹ ಹಾಗೂ ಭಾರಿ ಮಳೆ ಹಿನ್ನೆಲೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಾಲು ಸಾಲು ರಜೆ‌ ನೀಡಲಾಗಿತ್ತು. ಈ ರಜೆಗಳನ್ನು ಸರಿದೂಗಿಸುವ ನಿಟ್ಟಿನಲ್ಲಿ ಎಷ್ಟು ದಿನಗಳ ಕಾಲ ರಜೆಯನ್ನು ನೀಡಲಾಗಿತ್ತೋ ಅಷ್ಟನ್ನು ಬೇರೆ ದಿನಗಳಲ್ಲಿ ತರಗತಿ ನಡೆಸಿ ಸರಿದೂಗಿಸಲು ಸೂಚಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಅಲ್ಲದೇ ಅವಶ್ಯಕತೆ ಇದ್ದರೆ ಶನಿವಾರ, ಭಾನುವಾರವೂ ಶಾಲೆಗಳಲ್ಲಿ ತರಗತಿ ನಡೆಸಬಹುದಾಗಿದೆ.

ಶಾಲೆ

By

Published : Aug 19, 2019, 11:12 PM IST

ಬೆಂಗಳೂರು:ಪ್ರವಾಹ ಹಾಗೂ ಭಾರಿ ಮಳೆ ಹಿನ್ನೆಲೆ ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಹಾಗಾಗಿ ರಜೆಗಳನ್ನು ಸರಿದೂಗಿಸಲು ಶನಿವಾರ ಮತ್ತು ಭಾನುವಾರ ತರಗತಿ ನಡೆಸಲು ಶಿಕ್ಷಣ ಇಲಾಖೆ ಸೂಚಿಸಿದೆ.

ಸಾಲು ಸಾಲು ರಜೆ‌ ನೀಡಿಕೆ ಹಿನ್ನೆಲೆ ಈ‌ ಮೊದಲು ದಸರಾ ರಜೆಯನ್ನ ಕಡಿತಗೊಳಿಸಲು‌ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಆದರೆ ಈ ನಿರ್ಧಾರದಿಂದ ಈಗ ಹಿಂದೆ ಸರಿದಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯಾ ಜಿಲ್ಲಾ ನಿರ್ದೇಶಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ರಜೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಪ್ರವಾಹ ಉಂಟಾಗಿದ್ದ ಜಿಲ್ಲೆಗಳಲ್ಲಿ ಮಾತ್ರ ಎಷ್ಟು ದಿನಗಳ ಕಾಲ ರಜೆಯನ್ನು ನೀಡಲಾಗಿದ್ಯೋ ಅಷ್ಟು ದಿನಗಳನ್ನು ಬೇರೆ ದಿನಗಳಲ್ಲಿ ತರಗತಿ ನಡೆಸಿ ಸರಿದೂಗಿಸಲು ಹೇಳಲಾಗಿದೆ. ಅವಶ್ಯಕತೆ ಇದ್ದರೆ ಶನಿವಾರ ಭಾನುವಾರವೂ ಶಾಲೆಗಳಲ್ಲಿ ತರಗತಿ ನಡೆಸಲು ಸೂಚಿಸಲಾಗಿದೆ.

ABOUT THE AUTHOR

...view details