ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ಕೊರೊನಾ ರಣಕೇಕೆ: ಡಿಜಿಪಿ ಕಚೇರಿ ಸೇರಿ ಮಹಿಳಾ ಪೊಲೀಸ್ ಠಾಣೆಯೂ ಸೀಲ್​​ಡೌನ್! - ಬೆಂಗಳೂರು ಕೊರೊನಾ ಲೇಟೆಸ್ಟ್​ ನ್ಯೂಸ್​

ನಗರದಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಎಚ್ಚೆತ್ತುಕೊಂಡ ಬಿಬಿಎಂಪಿ, ಆರೋಗ್ಯ ಅಧಿಕಾರಿಗಳು ಕಚೇರಿಗೆ ಸ್ಯಾನಿಟೈಸ್ ಮಾಡಿ ಸೀಲ್​ಡೌನ್​​ ಮಾಡಿದ್ದಾರೆ.

corona
ಕೊರೊನಾ

By

Published : Jun 28, 2020, 7:59 PM IST

ಬೆಂಗಳೂರು: ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ತನ್ನ ಆರ್ಭಟ ಮುಂದುವರೆಸಿದೆ. ನಗರದ ಡಿಜಿ-ಐಜಿಪಿ ಕಚೇರಿ, ಪಶ್ಚಿಮ ವಿಭಾಗದ ಡಿಸಿಪಿ ಕಚೇರಿ, ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆ ಸೇರಿದಂತೆ ಹಲವೆಡೆ ಸಿಬ್ಬಂದಿಗೆ ಸೋಂಕು ತಗುಲಿದ್ದರಿಂದ, ಅವರ ಕಚೇರಿಗಳಿಗೆ ಸ್ಯಾನಿಟೈಸ್ ಬಳಿಕ ಸೀಲ್​ಡೌನ್​ ಮಾಡಲಾಗಿದೆ.

ನಗರದಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಎಚ್ಚೆತ್ತುಕೊಂಡ ಬಿಬಿಎಂಪಿ, ಆರೋಗ್ಯ ಅಧಿಕಾರಿಗಳು, ಕಚೇರಿಗೆ ಸ್ಯಾನಿಟೈಸ್ ಬಳಿಕ ಸೀಲ್​ಡೌನ್​​ ಮಾಡಿದ್ದಾರೆ. ಸೋಂಕಿತರನ್ನು ಕೂಡಲೇ ನಿಗದಿತ ಆಸ್ಪತ್ರೆಗೆ ರವಾನಿಸಿದ್ದಾರೆ.

ಡಿಸಿಪಿ ಕಚೇರಿಗೂ ವಕ್ಕರಿಸಿದ ಕೊರೊನಾ: ನಗರದ ಮೆಜೆಸ್ಟಿಕ್​​ನಲ್ಲಿರುವ ಪಶ್ಚಿಮ ವಿಭಾಗದ ಡಿಸಿಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾನ್ಸ್​ಟೇಬಲ್ ಹಾಗೂ ಕ್ಲರ್ಕ್ ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ತಕ್ಷಣವೇ ಬಿಬಿಎಂಪಿ ಅಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳು ಇಡೀ ಕಚೇರಿಗೆ ಸ್ಯಾನಿಟೈಸ್ ಮಾಡಿ ಮೂರು ದಿನಗಳ ಕಾಲ ಸೀಲ್​ಡೌನ್​​ ಮಾಡಿದ್ದಾರೆ. ಇದೀಗ ಅವರ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.

ಮಹಿಳಾ ಪೊಲೀಸ್ ಠಾಣೆಗೂ ಕಾಲಿಟ್ಟ ಕೊರೊನಾ: ಶಿವಾಜಿನಗರ ಮಹಿಳಾ‌ ಪೊಲೀಸ್ ಠಾಣೆಯಲ್ಲಿ‌ ಕೆಲಸ ಮಾಡುತ್ತಿದ್ದ ಓರ್ವ ಮಹಿಳಾ‌ ಸಿಬ್ಬಂದಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಈ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ಠಾಣೆಗೆ ಸ್ಯಾನಿಟೈಸ್ ಬಳಿಕ ಸೀಲ್​​​ಡೌನ್​​ ಮಾಡಿದ್ದಾರೆ.

ಈವರೆಗೆ ನಗರದ ಹಲವಾರು ಪೊಲೀಸ್ ಠಾಣೆಗಳನ್ನು ಸೀಲ್‌ಡೌನ್ ಮಾಡಿ ಸೋಂಕಿತರ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ಈಗ ಅವರಲ್ಲೂ ಸೋಂಕು ದೃಢಪಟ್ಟಿದೆ. ಹೀಗಾಗಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ.

ABOUT THE AUTHOR

...view details