ಕರ್ನಾಟಕ

karnataka

ETV Bharat / state

ವಿಧಾನಸಭೆಯಲ್ಲಿ ಮಂಡನೆಯಾದ ಗೋ ಹತ್ಯೆ ನಿಷೇಧ ವಿಧೇಯಕದಲ್ಲಿರುವ ನಿಯಮಗಳೇನು? - Karnataka cow Assassination Barrier and Conservation Obligation 2020

ಕರ್ನಾಟಕ ಗೋ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ 2020ಅನ್ನು ಸರ್ಕಾರ ಮಂಡಿಸಿದೆ.

what-are-the-stricter-rules-in-the-controversial-go-killing-ban
ಗೋ ಹತ್ಯೆ ನಿಷೇಧ

By

Published : Dec 9, 2020, 6:13 PM IST

ಬೆಂಗಳೂರು: ಕರ್ನಾಟಕ ಗೋ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ 2020ಅನ್ನು ಸರ್ಕಾರ ಮಂಡಿಸಿದೆ. ಕಾಂಗ್ರೆಸ್​​ನ ತೀವ್ರ ಆಕ್ಷೇಪದ ಮಧ್ಯೆ ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ವಿಧೇಯಕವನ್ನು ಮಂಡಿಸಿದರು.

ವಿಧೇಯಕದ ಪ್ರಮುಖ ಅಂಶಗಳೇನು?:

  • ಹಸು, ಕರು, ಎಮ್ಮೆ, ಎತ್ತು ಹಾಗೂ 13 ವರ್ಷ ಕೆಳಗಿನ ಕೋಣಗಳ ಹತ್ಯೆ ನಿಷೇಧ.
  • 3ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಜೊತೆಗೆ ಪ್ರತಿ ಗೋ ಹತ್ಯೆಗೆ 50,000ರಿಂದ ಗರಿಷ್ಠ ಐದು ಲಕ್ಷ ರೂ. ದಂಡ.
  • ಪುನರಾವರ್ತಿತ ಅಪರಾಧಕ್ಕೆ 1 ಲಕ್ಷದಿಂದ 10 ಲಕ್ಷದವರೆಗೆ ದಂಡ ಹಾಗೂ ಏಳು ವರ್ಷ ಜೈಲು ಶಿಕ್ಷೆ.
  • ಗೋ ಹತ್ಯೆ ಮಾಡುವವರಿಗೆ ನಿರ್ದಿಷ್ಟ ಅವಧಿವರೆಗೆ ಜಾಮೀನು ಇಲ್ಲ.
  • ಗೋ ಹತ್ಯೆ ಉದ್ದೇಶಕ್ಕಾಗಿ ಅಂತಾರಾಜ್ಯ ಹಾಗೂ ರಾಜ್ಯದೊಳಗಡೆ ಗೋ ಸಾಗಾಟ ನಿಷೇಧ.
  • ಕೃಷಿ ಹಾಗೂ ಪಶುಸಂಗೋಪನೆ ಉದ್ದೇಶಕ್ಕಾಗಿ ಗೋ ಸಾಗಾಟಕ್ಕೆ ಅಧಿಕಾರಿಗಳ ಅನುಮತಿ ಅಗತ್ಯ.
  • ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಸಾಗಾಟ ಮಾಡಬೇಕು.
  • ನಿಯಮ ಉಲ್ಲಂಘನೆ ಮಾಡಿದರೆ ಮೂರು ವರ್ಷದಿಂದ ಐದು ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ.
  • ಎಸ್​​ಐ ಶ್ರೇಣಿ ಹಾಗೂ ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಗಳು ತಪಾಸಣೆ ಹಾಗೂ ಮುಟ್ಟುಗೋಲು ಮಾಡಲು ಅಧಿಕಾರ.
  • ಮುಟ್ಟುಗೋಲು ಹಾಕಿದ ಕೂಡಲೇ ಸಂಬಂಧಿತ ಉಪವಿಭಾಗೀಯ ಮ್ಯಾಜಿಸ್ಟ್ರೇಟ್​​ಗೆ ವರದಿ ಮಾಡಬೇಕು.
  • ಗೋಹತ್ಯೆಗೆ ಸಂಬಂಧಿಸಿದಂತೆ ಸಾಗಾಟ ಮಾಡಿದ ವಾಹನಗಳು ಹಾಗೂ ಇತರ ಸಲಕರಣೆಗಳನ್ನು ಆರೋಪಿಗೆ ಹಿಂದುರುಗಿಸಲು ಬ್ಯಾಂಕ್ ಗ್ಯಾರಂಟಿ ನೀಡುವುದು ಅಗತ್ಯ.
  • ಗೋಹತ್ಯೆ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ರಚನೆ ಮಾಡಬಹುದು.

    ಯಾವುದಕ್ಕೆ ವಿನಾಯಿತಿ?:
  • ಸಂಶೋಧನಾ ಉದ್ದೇಶಕ್ಕಾಗಿ ಬಳಸುವ ಗೋವುಗಳಿಗೆ ಈ ಕಾನೂನಿನಿಂದ ವಿನಾಯಿತಿ.
  • ಪಶು ವೈಧ್ಯಾಧಿಕಾರಿ ದೃಢೀಕರಿಸಿದರೆ ಗೋ ಹತ್ಯೆ ಮಾಡಲು ಅವಕಾಶ.
  • ಪಶು ವೈದ್ಯಾಧಿಕಾರಿಗಳು ದೃಢೀಕರಿಸಿದ ರೋಗಗಳಿಂದ ಬಳಲುತ್ತಿರುವ ಗೋವುಗಳ ಹತ್ಯೆಗೆ ಅವಕಾಶ.

ABOUT THE AUTHOR

...view details