ಕರ್ನಾಟಕ

karnataka

ETV Bharat / state

ಎಸ್​ಡಿಪಿಐ,ಪಿಎಫ್​ಐ ಬಗ್ಗೆ ಸಚಿವ ಆರ್.ಅಶೋಕ್, ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದೇನು? - ಎಸ್​ಡಿಪಿಐ, ಪಿಎಫ್​ಐ ನಿಷೇಧ ವಿಚಾರ

ಎಸ್‌ಡಿಪಿಐ, ಪಿಎಫ್‌ಐ, ಕೆಎಫ್​ಡಿ ಸಂಘಟನೆಯಿಂದ ಬಿಜೆಪಿ,ಆರ್​ಎಸ್​ಎಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನಾನೇ ಗೃಹ ಮಂತ್ರಿ ಆದಾಗ ನಮ್ಮ ಕಾರ್ಯಕರ್ತರನ್ನು ಕೊಲೆ ಮಾಡಿದ್ದಾರೆ. ಕೂಡಲೇ ಈ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಎಂದರು. ಚಾಮರಾಜನಗರದಲ್ಲಿ ಉಗ್ರರು ತರಬೇತಿ ಪಡೆಯಲು ಜಾಗ ಹುಡುಕುತ್ತಿರುವ ಮಾಹಿತಿ ಬಂದಿದೆ ಅಂತಾ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

ಆರ್.ಅಶೋಕ್, ಡಿಸಿಎಂ ಅಶ್ವತ್ಥ್ ನಾರಾಯಣ್
R. Ashok and DCM Ashwath Narayan

By

Published : Jan 17, 2020, 10:51 PM IST

Updated : Jan 17, 2020, 11:30 PM IST

ಬೆಂಗಳೂರು:ನಮ್ಮ ರಾಜ್ಯದಲ್ಲಿ ಎಸ್​ಡಿಪಿಐ,ಪಿಎಫ್ಐ ಸಂಘಟನೆಗಳನ್ನು ನಿಷೇಧ ಮಾಡಲು ಕೇಂದ್ರದ ಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್‌ ಅಶೋಕ್ ತಿಳಿಸಿದರು.

ಎಸ್​ಡಿಪಿಐ, ಪಿಎಫ್​ಐ ನಿಷೇಧದ ಬಗ್ಗೆ ಆರ್.ಅಶೋಕ್, ಡಿಸಿಎಂ ಅಶ್ವತ್ಥ್ ನಾರಾಯಣ್ ಪ್ರತಿಕ್ರಿಯೆ..

ವಿಧಾನಸೌಧದಲ್ಲಿ ಮಾತನಾಡಿದ ಅವರು, ಎಸ್‌ಡಿಪಿಐ, ಪಿಎಫ್‌ಐ, ಕೆಎಫ್​ಡಿ ಸಂಘಟನೆಯಿಂದ ಬಿಜೆಪಿ,ಆರ್​ಎಸ್​ಎಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನಾನೇ ಗೃಹ ಮಂತ್ರಿ ಆದಾಗ ನಮ್ಮ ಕಾರ್ಯಕರ್ತರನ್ನು ಕೊಲೆ ಮಾಡಿದ್ದಾರೆ. ಕೂಡಲೇ ಈ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಎಂದರು.ಚಾಮರಾಜನಗರದಲ್ಲಿ ಉಗ್ರರು ತರಬೇತಿ ಪಡೆಯಲು ಜಾಗ ಹುಡುಕುತ್ತಿರುವ ಮಾಹಿತಿ ಬಂದಿದೆ. ಈ ಸಂಬಂಧ ಚಾಮರಾಜನಗರ ಡಿಸಿಗೆ ವರದಿ ಕೇಳಿದ್ದೇನೆ. ವರದಿ ಬಂದ ಬಳಿಕ ಸಿಎಂ ಗಮನಕ್ಕೆ ತಂದು ಕ್ರಮ ತೆಗೆದುಕೊಳ್ಳುತ್ತೇವೆ. ಬೇರೆ ರಾಜ್ಯದಲ್ಲಿ ಇಂತಹ ಸಂಘಟನೆ ಬ್ಯಾನ್ ಮಾಡೋ ಕೂಗು ಕೇಳಿ ಬಂದಿದೆ ಎಂದರು.

ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ:ಸಾಕಷ್ಟು ಜನರನ್ನು ಈ ಸಂಘಟನೆಗಳು ಬಲಿ ತೆಗೆದು ಕೊಂಡಿವೆ. ಉಗ್ರಗಾಮಿ ಚಟುವಟಿಕೆಗಳನ್ನು ಈ ಸಂಘಟನೆ ಮಾಡುತ್ತಿದೆ. ಈ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂತಹ ಸಂಘಟನೆ ಮೇಲೆ ನಿರಂತರ ನಿಗಾ ಇಡಬೇಕು. ಅಮಾಯಕರನ್ನು ಪ್ರಚೋದನೆ ಮಾಡಿ ಸಂಘಟನೆಗೆ ಸೇರಿಸಿಕೊಳ್ಳುತ್ತಿದ್ದಾರೆ. ಸೌಹಾರ್ದತೆ, ಪ್ರೀತಿ-ವಿಶ್ವಾಸದ ಮುಂದೆ ಯಾವುದೂ ದೊಡ್ಡದಲ್ಲ. ಯಾರೇ ಅಮಾಯಕರು ಇಂತಹ ಕೆಲಸದಲ್ಲಿ ತೊಡಗಿದ್ದರೆ, ಅವರು ವಾಪಸ್ ಬರಬೇಕು. ಇಂತಹ ಸಂಘಟನೆಗಳ ಕೃತ್ಯ ತಡೆಯಲು‌ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

Last Updated : Jan 17, 2020, 11:30 PM IST

ABOUT THE AUTHOR

...view details