ಬೆಂಗಳೂರು:ಅಯೋಧ್ಯೆ ಭೂ ವಿವಾದ ಸಂಬಂಧ ಸುಪ್ರೀಂಕೋರ್ಟ್ ಇಂದು ನೀಡುವ ತೀರ್ಪು ಏನೇ ಬಂದರು ಸ್ವಾಗತಿಸೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ತೀರ್ಪು ಏನೇ ಬರಲಿ ಸ್ವಾಗತಿಸೋಣ, ಶಾಂತಿ ಕಾಪಾಡೋಣ: ಸಿದ್ದರಾಮಯ್ಯ - siddaramayya latest news
ಅಯೋಧ್ಯೆ ಭೂ ವಿವಾದ ಸಂಬಂಧ ಸುಪ್ರೀಂಕೋರ್ಟ್ ಇಂದು ನೀಡುವ ತೀರ್ಪು ಏನೇ ಬಂದರು ಸ್ವಾಗತಿಸೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಟ್ವೀಟ್ ಮೂಲಕ ರಾಜ್ಯದ ಜನತೆಗೆ ಮನವಿ ಮಾಡಿರುವ ಅವರು, ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವ್ಯಾಜ್ಯದ ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸೋಣ. ಪ್ರಜಾಪ್ರಭುತ್ವದ ಧರ್ಮವಾದ ಸಂವಿಧಾನದ ಮೇಲೆ ಭರವಸೆ ಇಡೋಣ. ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡೋಣ ಎಂದಿದ್ದಾರೆ.
ತೀರ್ಪು ಯಾರ ಪರವಾಗಿಯೇ ಬಂದರು ಅದನ್ನು ಮುಕ್ತವಾಗಿ ಒಪ್ಪಿಕೊಳ್ಳೋಣ. ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಕರ್ನಾಟಕದಲ್ಲಿ ಇದಕ್ಕೆ ವ್ಯತಿರಿಕ್ತವಾದ ಪ್ರತಿಕ್ರಿಯೆ ಬರದಂತೆ ನೋಡಿಕೊಳ್ಳಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
Last Updated : Nov 9, 2019, 10:48 AM IST