ಬೆಂಗಳೂರು: ವಿವಿ ಪುರಂ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕುರಿತು ಮೇಯರ್ ಗೌತಮ್ ಕುಮಾರ್ ಪರಿಶೀಲನೆ ನಡೆಸಿದರು.
ವಿವಿ ಪುರಂ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ....ಪರಿಶೀಲನೆ ನಡೆಸಿದ ಮೇಯರ್ - White tapping latest news
ವಿವಿ ಪುರಂ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಮುಗಿದಿದ್ದು, ಇನ್ನು ಸಣ್ಣ-ಪುಟ್ಟ ಕೆಲಸಗಳು ಬಾಕಿ ಇವೆ. ಹಾಗಾಗಿ ಇಂದು ಸಹ ವಿವಿ ಪುರಂ ವ್ಯಾಪ್ತಿಗೆ ಭೇಟಿ ನೀಡಿದ ಮೇಯರ್ ಗೌತಮ್ ಕುಮಾರ್ ಕಾಮಗಾರಿ ಕುರಿತು ಪರಿಶೀಲನೆ ನಡೆಸಿದರು.
ವಿವಿ ಪುರಂ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಮುಗಿದಿದ್ದು, ಇನ್ನು ಸಣ್ಣ-ಪುಟ್ಟ ಕೆಲಸಗಳು ಬಾಕಿ ಇವೆ. ಹಾಗಾಗಿ ನಿನ್ನೆ ವಿವಿ ಪುರಂ ವ್ಯಾಪ್ತಿಗೆ ಭೇಟಿ ನೀಡಿದ ಮೇಯರ್ ಗೌತಮ್ ಕುಮಾರ್, ಸ್ಥಳೀಯರ ಅಹವಾಲುಗಳನ್ನು ಆಲಿಸಿದ್ದರು. ಇಂದಿನಿಂದಲೇ ಕೆಲಸ ಪ್ರಾರಂಭಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಇಂದು ಕೂಡಾ ತಪಾಸಣೆ ನಡೆಸಿದರು. ವೈಟ್ ಟಾಪಿಂಗ್ ಕಾಮಗಾರಿ ಮುಗಿದಿದ್ದು, ಪಾದಚಾರಿ ಮಾರ್ಗ ಕಾಮಗಾರಿ ಹಾಗೂ ಇತರೆ ಸಣ್ಣ-ಪುಟ್ಟ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಮುಂದಿನ 15 ದಿನಗಳಲ್ಲಿ ಪಾದಚಾರಿ ಮಾರ್ಗ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.