ಕರ್ನಾಟಕ

karnataka

ETV Bharat / state

ಪಾದರಾಯನಪುರ ಗಲಭೆಕೋರರನ್ನು ರಾಮನಗರಕ್ಕೆ ಕಳುಹಿಸಿದ್ದೇಕೆ..? ಸರ್ಕಾರದಿಂದ ಮಾಹಿತಿ

ಕೊರೊನಾ ಭೀತಿಯ ನಡುವೆ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿದ್ದ ಗಲಭೆ ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗಿದ್ದಲ್ಲದೆ ರಾಜಕೀಯ ಬಿಕ್ಕಟ್ಟಿಗೂ ಕಾರಣವಾಗಿತ್ತು. ಇಲ್ಲಿನ ಸೋಂಕಿತರನ್ನು ಯಾವ ಜೈಲಿನಲ್ಲಿ ಕ್ವಾರಂಟೈನ್ ಮಾಡಬೇಕು ಎಂಬುದೇ ಸರ್ಕಾರಕ್ಕೆ ತಲೆನೋವಿನ ಕೆಲಸವಾಗಿತ್ತು. ಈ ನಡುವೆ ರಾಮನಗರದ ಜೈಲಿಗೆ ಅವರನ್ನು ಕಳುಹಿಸಲಾಗಿತ್ತು. ಇದೀಗ ಹೈಕೋರ್ಟ್​ಗೆ ಸರ್ಕಾರ ಈ ಕುರಿತು ಸ್ಪಷ್ಟನೆ ನೀಡಿದೆ.

Why did the Padarayanapur rioters be sent to Ramanagar? government informs to high court
ಪಾದರಾಯನಪುರ ಗಲಭೆಕೋರರನ್ನು ರಾಮನಗರಕ್ಕೆ ಕಳುಹಿಸಿದ್ದೇಕೆ..? ಸರ್ಕಾರದಿಂದ ಮಾಹಿತಿ

By

Published : May 1, 2020, 11:17 PM IST

ಬೆಂಗಳೂರು: ಪಾದರಾಯನಪುರದಲ್ಲಿ ಗಲಭೆ ಸೃಷ್ಟಿಸಿದ ಕೊರೊನಾ ಸೋಂಕು ಪೀಡಿತ ಆರೋಪಿಗಳನ್ನು ರಾಮನಗರ ಜೈಲಿಗೆ ಕಳುಹಿಸಲು ಕಾರಣವೇನಿತ್ತು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಿದೆ. ನಗರದ ಆನೇಕಲ್ ಸಮೀಪವಿರುವ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಿದ್ದ ಕಾರಣದಿಂದಾಗಿ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಲಾಯಿತು ಎಂದು ರಾಜ್ಯ ಸರ್ಕಾರ ಮಾಹಿತಿ‌ ನೀಡಿದೆ.

ಪಾದರಾಯನಪುರದ ದಾಳಿಕೋರರ ಮೇಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ -2005ರ ಸೆಕ್ಷನ್ 51, 52ರಡಿ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆ-1980ರ ಅಡಿಯಲ್ಲಿ ದೂರು ದಾಖಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರಿ ವಕೀಲ ವಿಕ್ರಂ ಹುಯಿಲಗೋಳ ಅವರು ಲಿಖಿತ ಹೇಳಿಕೆ ಸಲ್ಲಿಸಿ ಈ ಮಾಹಿತಿ ನೀಡಿದರು. ಪಾದರಾಯನಪುರ ಗಲಭೆ ಪ್ರಕರಣದ ಆರೋಪಿಗಳ ಪೈಕಿ ಐವರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದರಿಂದ‌ 121 ಆರೋಪಿಗಳನ್ನು ಕ್ವಾರಂಟೈನ್‌ನಲ್ಲಿಡುವ ಅವಶ್ಯಕತೆ ಎದುರಾಯಿತು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ 4,526 ಕೈದಿಗಳನ್ನಿಡಬಹುದು.‌ ಆದರೆ ಈಗಾಗಲೇ ಜೈಲಿನಲ್ಲಿ 4,914 ಕೈದಿಗಳನ್ನು ಇರಿಸಲಾಗಿದೆ. ಹೀಗಾಗಿ‌, ಕೈದಿಗಳಿಗೆ ಕೊರೊನಾ ಹರಡದಂತೆ ತಡೆಯಲು ಪಾದರಾಯನಪುರದ ಆರೋಪಿಗಳನ್ನು ರಾಮನಗರ ಜೈಲಿನಲ್ಲಿ ಕ್ವಾರಂಟೈನ್​​ನಲ್ಲಿ ಇಡಲಾಗಿತ್ತು ಎಂದು ಸರ್ಕಾರಿ ವಕೀಲರು ಪೀಠಕ್ಕೆ ವಿವರಿಸಿದರು.

ABOUT THE AUTHOR

...view details