ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾಕಿಷ್ಟು ತರಾತುರಿಯಲ್ಲಿದ್ದೀರಿ ಎಂದು ಮಾಧ್ಯಮಗಳನ್ನೇ ಪ್ರಶ್ನಿಸುವ ಮೂಲಕ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಂಪುಟ ವಿಸ್ತರಣೆ ವಿಳಂಬ ಸಾಧ್ಯತೆ ಕುರಿತು ಸುಳಿವು ನೀಡಿದ್ದಾರೆ.
ಗೋವಿಂದರಾಜ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳುತ್ತಾರೆ. ಸಂಪುಟ ವಿಸ್ತರಣೆ ವಿಚಾರವನ್ನು ಸಿಎಂ ಅವರೇ ನಿರ್ಧರಿಸಬೇಕು. ಈ ಸಂಬಂಧ ಚರ್ಚೆ, ಕೆಲಸಗಳು ಮುಂದುವರೆದಿವೆ ಎಂದರು.