ಬೆಂಗಳೂರು: ಶಾಸಕ ಸ್ಥಾನಕ್ಕೆ ನಾನೇಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿರುವ ಆರ್ ವಿ ದೇಶಪಾಂಡೆ, ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನೇಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ: ದೇಶಪಾಂಡೆ - kannadanews
ನಾನೇಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನಕ್ಕೆ ಈಗಾಗಲೇ ನಾನು ರಾಜೀನಾಮೆ ನೀಡಿದ್ದೇನೆ. ಪಕ್ಷದ ಅಧ್ಯಕ್ಷರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ನೀಡಿದ್ದೇವೆ. ಅನರ್ಹತೆ ಸಂಬಂಧ ಈಗಾಗಲೇ ಅತೃಪ್ತರ ವಿರುದ್ಧ ದೂರು ನೀಡಲಾಗಿದೆ. ಅಧಿವೇಶನ ವೇಳೆ ವಿಪ್ ಉಲ್ಲಂಘನೆ ಮಾಡಿದರೆ ಆಗ ಮಾತ್ರ ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಶ್ನೆ ಬರುತ್ತದೆ ಎಂದು ಸೂಚ್ಯವಾಗಿ ತಿಳಿಸಿದರು.
ಅಧಿವೇಶನ ವೇಳೆ ಎಲ್ಲ ಪಕ್ಷದವರು ವಿಪ್ ಜಾರಿ ಮಾಡುತ್ತಾರೆ. ಅದರಲ್ಲೇನು ವಿಶೇಷತೆ ಇಲ್ಲ. ಅದೇ ರೀತಿ ನಮ್ಮ ಪಕ್ಷದಿಂದಲೂ ವಿಪ್ ಜಾರಿ ಮಾಡಿದ್ದೇವೆ. ವಿಪ್ ಉಲ್ಲಂಘಿಸಿದ್ರೆ, ಮಾತ್ರ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯಿಸುತ್ತದೆ ಎಂದು ದೇಶಪಾಂಡೆ ಸ್ಪಷ್ಟಪಡಿಸಿದರು.