ಕರ್ನಾಟಕ

karnataka

ETV Bharat / state

ಮುಂದಿನ 5 ದಿನ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ: ಹವಾಮಾನ ಇಲಾಖೆ - ಹವಾಮಾನ ಇಲಾಖೆ

ಪೂರ್ವ ಅರಬ್ಬಿ ಸಮುದ್ರದ ಕರಾವಳಿಯಲ್ಲಿ ಟ್ರಫ್ (ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಪರಿಣಾಮ) ಇರುವುದರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗುವ ವ್ಯವಸ್ಥೆ ಇರುವುದರಿಂದ ರಾಜ್ಯಕ್ಕೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ತಜ್ಞ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ತಜ್ಞ ಸಿ.ಎಸ್ ಪಾಟೀಲ್
ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ತಜ್ಞ ಸಿ.ಎಸ್ ಪಾಟೀಲ್

By

Published : Jun 30, 2020, 4:15 PM IST

ಬೆಂಗಳೂರು: ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಿದೆ. ಪೂರ್ವ ಅರಬ್ಬಿ ಸಮುದ್ರದ ಕರಾವಳಿಯಲ್ಲಿ ಟ್ರಫ್ ಇರುವುದರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್

ಮುಂದಿನ ಐದು ದಿನ ಕರಾವಳಿ ಜಿಲ್ಲೆಗಳಿಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕೆಲವೆಡೆ ಭಾರಿ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಿಗೂ ಮಳೆಯಾಗಲಿದೆ. ಜೂನ್ 30, ಜುಲೈ 1 ಹಾಗೂ 3ನೇ ತಾರೀಖಿಗೆ ಅತೀ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದರು.

ಬೆಂಗಳೂರಿಗೂ ಮಳೆ:

ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಅವರು ತಿಳಿಸಿದ್ದಾರೆ.

ABOUT THE AUTHOR

...view details