ಕರ್ನಾಟಕ

karnataka

ETV Bharat / state

ಬೆಂಗಳೂರು: ಮಹಿಳೆ ಬಲಿ ಪಡೆದ ಗ್ಯಾಸ್‌ ಸೋರಿಕೆ, ಸಾಫ್ಟ್‌ವೇರ್‌ ಕಟ್ಟಡದಲ್ಲಿ ಬೆಂಕಿ - ಬೆಂಕಿ ಹೊತ್ತಿಕೊಳ್ಳಲು ಶಾರ್ಟ್ ಸರ್ಕ್ಯೂಟ್ ಕಾರಣ

ಅಡುಗೆ ಮಾಡುತ್ತಿದ್ದಾಗ ಗ್ಯಾಸ್‌ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇನ್ನೊಂದೆಡೆ ಸಾಫ್ಟ್‌ವೇರ್‌ ಕಂಪನಿಯಿದ್ದ ಕಟ್ಟಡದಲ್ಲೂ ಅಗ್ನಿ ಆಕಸ್ಮಿಕ ಸಂಭವಿಸಿತು.

Woman burns alive due to gas leakage
ಬೆಂಗಳೂರು:ಗ್ಯಾಸ್ ಲಿಕೇಜ್ ನಿಂದ ಮಹಿಳೆ ಸಜೀವ ದಹನ: ಇತ್ತ ಸಾಫ್ಟ್‌ವೇರ್ ಕಂಪನಿಯಲ್ಲಿ ಅಗ್ನಿ ಅವಘಡ..

By

Published : Feb 7, 2023, 8:11 PM IST

Updated : Feb 7, 2023, 8:26 PM IST

ಸಾಫ್ಟ್‌ವೇರ್‌ ಕಟ್ಟಡದಲ್ಲಿ ಅಗ್ನಿ ಅವಘಡ

ಬೆಂಗಳೂರು:ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಮಂತ್ರಿ ಮಾಲ್ ಹಿಂಭಾಗ ನಡೆದಿದೆ. ಮೇರಿ (55) ಮೃತರು. ಇವರ ಮೈದುನ ಒಂದು ತಿಂಗಳ ಹಿಂದೆ ಮೃತಪಟ್ಟಿದ್ದು, ಇವತ್ತು ತಿಂಗಳ ಕಾರ್ಯವಿತ್ತು. ಮೇರಿ ಅಡುಗೆ ಕೆಲಸದಲ್ಲಿ ನಿರತರಾಗಿದ್ದಾಗ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಡುಗೆ ಮಾಡುತ್ತಿದ್ದಾಗ ಗ್ಯಾಸ್ ಲೀಕ್ ಆಗಿರುವುದನ್ನು ಮೇರಿ ಗಮನಿಸಿರಲಿಲ್ಲ. ಸ್ಟೌವ್​ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೆಚ್ಚಾಗಿದೆ. ತಕ್ಷಣವೇ ಪಕ್ಕದಲ್ಲಿದ್ದ ಬಟ್ಟೆ, ಗ್ಯಾಸ್ ಪೈಪ್, ಮನೆಯಲ್ಲಿರುವ ವಸ್ತುಗಳಿಗೂ ಬೆಂಕಿ ವ್ಯಾಪಿಸಿದೆ. ಮೇರಿ ಎಷ್ಟೇ ಪ್ರಯತ್ನಪಟ್ಟರೂ ಅಡುಗೆ ಮನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ. ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಸಾಫ್ಟ್‌ವೇರ್ ಕಂಪನಿಯಲ್ಲಿ ಬೆಂಕಿ:ಯಲಹಂಕದ ಸಾಫ್ಟ್‌ವೇರ್ ಕಂಪನಿಯೊಂದರ ಕೊನೆಯ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಕಟ್ಟಡದಲ್ಲಿದ್ದ ಉದ್ಯೋಗಿಗಳು ಹೊರಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬಹುಮಹಡಿ ಕಟ್ಟಡವಾದ ಕಾರಣ 8ನೇ ಮಹಡಿಯಲ್ಲಿ ಅಗ್ನಿಯ ಕೆನ್ನಾಲಿಗೆ ಹೆಚ್ಚಾಗಿದ್ದು ಏರಿಯಲ್ ಲ್ಯಾಡರ್ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.

ಇದನ್ನೂ ಓದಿ:ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ಗಂಡನಿಂದ ಕೊಲೆ ಶಂಕೆ

Last Updated : Feb 7, 2023, 8:26 PM IST

ABOUT THE AUTHOR

...view details