ಬೆಂಗಳೂರು: ನಗರದ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಕ್ಷಿಣೆ ಕಿರುಕುಳ ಆರೋಪ ಹಿನ್ನೆಲೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ಮನೆಯವರೇ ತಮ್ಮ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಬೆಂಗಳೂರಲ್ಲಿ ಮಹಿಳೆ ಆತ್ಮಹತ್ಯೆ: ವರದಕ್ಷಿಣೆಗಾಗಿ ಗಂಡನ ಮನೆಯವರಿಂದ ಕೊಲೆ ಆರೋಪ - ಬೆಂಗಳೂರು ವರದಕ್ಷಿಣೆ ಕಿರುಕುಳ ಆರೋಪ ಹಿನ್ನೆಲೆ ಮಹಿಳೆ ಆತ್ಮಹತ್ಯೆ
ಸಿಲಿಕಾನ್ ಸಿಟಿಯಲ್ಲಿ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಗಂಡನ ಮನೆಯವರೇ ತಮ್ಮ ಮಗಳನ್ನು ಕೊಲೆಗೈದಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಬೆಂಗಳೂರಲ್ಲಿ ಮಹಿಳೆ ಆತ್ಮಹತ್ಯೆ
ಉಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದು ಬಂದಿದೆ. 2015ರಲ್ಲಿ ಉಷಾ ಮತ್ತು ರಂಜಿತ್ ಮದುವೆಯಾಗಿದ್ದರು. ಆದರೆ ಮದುವೆಯಾದ ದಿನದಿಂದಲೂ ಗಂಡನ ಕುಟುಂಬದವರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಯಾವುದೇ ಕೆಲಸಕ್ಕೆ ಹೋಗದ ರಂಜಿತ್, ತವರು ಮನೆಯಿಂದ ಹಣ ತರುವಂತೆ ಕಿರುಕುಳ ನೀಡುತ್ತಿದ್ದ. ಇದೀಗ ರಂಜಿತ್ ಹಾಗೂ ಕುಟುಂಬದವರು ಸೇರಿ ಮಗಳನ್ನು ಕೊಲೆ ಮಾಡಿರುವುದಾಗಿ ಉಷಾ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
ವರ್ತೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.