ಬೆಂಗಳೂರು:ನಗರದ ಪಿಜಿಯೊಂದರಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಿಜಿಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ - suicide
ನಗರದ ಪಿಜಿಯೊಂದರಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಆರ್.ಎಸ್.ಗಾಯತ್ರಿ(21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಯಡಿಯೂರಿನ ಟಾಟಾ ಸಿಲ್ಕ್ ಫಾರಂ ಪಿಜಿಯಲ್ಲಿ ಎರಡು ತಿಂಗಳಿನಿಂದ ವಾಸವಿದ್ದಳು. ಆಕೆ ಮೂಲತಃ ತಮಿಳುನಾಡಿನವಳಾಗಿದ್ದು, ಜಯನಗರದ ಜೈನ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪಿಜಿಯ ಕೊಠಡಿಯಲ್ಲಿ ಯಾರು ಇಲ್ಲದಿರುವುದನ್ನು ನೋಡಿಕೊಂಡು ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡಿದ್ದಾಳೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಾವಿನ ಸುದ್ದಿಯನ್ನು ಪೋಷಕರಿಗೆ ತಿಳಿಸಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.