ಬೆಂಗಳೂರು:ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಲೇಶ್ವರಂ ರೈಲು ನಿಲ್ದಾಣ ಬಳಿ ನಡೆದಿದೆ.
ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ - ಮಹಿಳೆ ಆತ್ಮಹತ್ಯೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮಂಗಳೂರಿಗೆ ಹೋಗುವ ರೈಲಿಗೆ ಮಹಿಳೆಯೊಬ್ಬಳು ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಹಿಳೆ ಆತ್ಮಹತ್ಯೆ
ಜಾಯ್ ಪ್ರೀತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮಂಗಳೂರಿಗೆ ಹೋಗುವ ರೈಲಿಗೆ ಮಹಿಳೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಜಾಯ್ ಪ್ರೀತಿ ಹೆಸರು ಹೊರತುಪಡಿಸಿ ಉಳಿದ ವಿವರ ಬಗ್ಗೆ ತಿಳಿದುಬಂದಿಲ್ಲ. ಘಟನೆ ಬೆನ್ನಲೇ ಸಿಟಿ ರೈಲ್ವೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಹಿನ್ನೆಲೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.