ಬೆಂಗಳೂರು:ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾಯೇದಾ ಬೇಗಂ (40) ಮೃತಪಟ್ಟ ಮಹಿಳೆ.
ಅಪರಿಚಿತ ವಾಹನ ಡಿಕ್ಕಿ: ಸಿಲಿಕಾನ್ ಸಿಟಿಯಲ್ಲಿ ಮಹಿಳೆ ಸಾವು - road_accident news
ಬೆಂಗಳೂರಿನಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.
![ಅಪರಿಚಿತ ವಾಹನ ಡಿಕ್ಕಿ: ಸಿಲಿಕಾನ್ ಸಿಟಿಯಲ್ಲಿ ಮಹಿಳೆ ಸಾವು woman death in road accident](https://etvbharatimages.akamaized.net/etvbharat/prod-images/768-512-7057542-798-7057542-1588595114268.jpg)
ಅಪರಿಚಿತ ವಾಹನ ಡಿಕ್ಕಿ: ಮಹಿಳೆ ಸಾವು
ಜಕ್ಕೂರು ಏರ್ಪೋರ್ಟ್ ರಸ್ತೆಯ ನಾರಾಯಣಪುರ ರಸ್ತೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವಿದ್ಯಾರಣ್ಯಪುರದಿಂದ ಜಕ್ಕೂರಿನ ಕಡೆ ತೆರಳುತ್ತಿದ್ದಾಗ ಏಕಾಏಕಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಪರಿಣಾಮ ಜಾಯೇದಾ ಬೇಗಂ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಈ ಬಗ್ಗೆ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.