ಕರ್ನಾಟಕ

karnataka

ETV Bharat / state

ಚಿಕಿತ್ಸೆ ಸಿಗದೆ ಮಹಿಳೆ ಸಾವು ಪ್ರಕರಣ: ವರದಿ ನೀಡುವಂತೆ ಸಚಿವ‌ ಶ್ರೀರಾಮುಲು‌ ಸೂಚನೆ - Woman died without treatment in Bangalore

ಚಿಕಿತ್ಸೆ ಸಿಗದೆ ಮಹಿಳೆ ಸಾವನ್ನಪ್ಪಿದ ವಿಚಾರವಾಗಿ ಆರೋಗ್ಯ ಸಚಿವ ಶ್ರೀರಾಮುಲು, ತಪ್ಪು ಆಸ್ಪತ್ರೆಯದ್ದಾಗಿದ್ದರೆ ಅವರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಸಚಿವ‌ ಶ್ರೀರಾಮುಲು‌ ಸೂಚನೆ
ಸಚಿವ‌ ಶ್ರೀರಾಮುಲು‌ ಸೂಚನೆ

By

Published : May 11, 2020, 11:44 PM IST

ಬೆಂಗಳೂರು: ಕಳೆದ ರಾತ್ರಿ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೆ ಮಹಿಳೆಯೊಬ್ಬರು ಮೃತಪಟ್ಟಿರುವುದು ದುರದೃಷ್ಟಕರ. ಈ ಕುರಿತು ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಈ ಮೊದಲೇ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳು ತುರ್ತು ಸಂದರ್ಭಗಳಲ್ಲಿ ಯಾವುದೇ ರೋಗಿಗೆ ಚಿಕಿತ್ಸೆ ನಿರಾಕರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಹೀಗಿದ್ದರೂ ಈ ಘಟನೆ ನಡೆದಿದ್ದು ವಿಪರ್ಯಾಸ. ಈಗಾಗಲೇ ಈ ಬಗ್ಗೆ ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ವರದಿಯನ್ನಾಧರಿಸಿ ತಪ್ಪು ಆಸ್ಪತ್ರೆಯದ್ದಾಗಿದ್ದರೆ ಅವರ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಹಾಗೆಯೇ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details