ಬೆಂಗಳೂರು:ಸಾವು ಯಾವಾಗ, ಯಾರಿಗೆ, ಹೇಗೆ ಬರುತ್ತೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಈಗ ಇದ್ದವರು ಕೆಲ ಕ್ಷಣದಲ್ಲೇ ಇರುವುದಿಲ್ಲ. ಅಂತಹದೇ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ಇಂದು ನಡೆದಿದೆ. ಜಿಮ್ವೊಂದರಲ್ಲಿ ವರ್ಕೌಟ್ ಮಾಡುತ್ತಿದ್ದಾಗಲೇ ದಿಢೀರ್ ಕುಸಿದು ಬಿದ್ದು ಮಹಿಳೆಯೊಬ್ಬಳು ಕೊನೆಯುಸಿರೆಳೆದಿದ್ದಾಳೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರಿನ ಮಲ್ಲೇಶಪಾಳ್ಯದಲ್ಲಿನ ಜಿಮ್ವೊಂದರಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ವಿನಯ ಕುಮಾರಿ (44) ಎಂಬುವರೇ ಮೃತ ಮಹಿಳೆ. ನಗರದ ಐಡಿಸಿ ಕಂಪನಿಯಲ್ಲಿ ಬ್ಯಾಕ್ಗ್ರೌಂಡ್ ವೆರಿಫಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವಿನಯಕುಮಾರಿ, ಶುಕ್ರವಾರ ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿ ಮನೆಗೆ ಬಂದಿದ್ದರು ಎಂದು ಪ್ರಕರಣದ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.