ಬೆಂಗಳೂರು:ಪಾರ್ಕ್ನಲ್ಲಿ ಸ್ನೇಹಿತನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಯುವತಿಯನ್ನು ಕಾರಿನೊಳಗೆ ಎಳೆದೊಯ್ದು ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳನ್ನು ನಗರದ ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 25ರಂದು ದುಷ್ಕೃತ್ಯ ನಡೆದಿತ್ತು.
ಸತೀಶ್, ವಿಜಯ್, ಶ್ರೀಧರ್ ಹಾಗೂ ಕಿರಣ್ ಬಂಧಿತರು. ಕೋರಮಂಗಲದ ನ್ಯಾಷನಲ್ ಗೇಮ್ಸ್ ಪಾರ್ಕ್ನಲ್ಲಿ ರಾತ್ರಿ 10 ಗಂಟೆಯ ಸುಮಾರಿಗೆ ಯುವತಿ ಹಾಗೂ ಸ್ನೇಹಿತ ಕುಳಿತುಕೊಂಡಿದ್ದರು. ಅಲ್ಲಿಗೆ ಬಂದ ಈ ನಾಲ್ವರು ಸ್ನೇಹಿತನನ್ನು ಬೆದರಿಸಿ ಕಳುಹಿಸಿದ್ದಾರೆ. ನಂತರ ಯುವತಿ ಜೊತೆಗೆ ಜಗಳ ತೆಗೆದು ಕಾರಿನಲ್ಲಿ ಕಿಡ್ನಾಪ್ ಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ
ನಗರದ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಸುತ್ತಾಟ ನಡೆಸಿ ಚಲಿಸುತ್ತಿದ್ದ ಕಾರಿನಲ್ಲಿಯೇ ಅತ್ಯಾಚಾರ ಎಸಗಿದ್ದಾರೆ. ರಾತ್ರಿಪೂರ್ತಿ ಸುತ್ತಾಡಿಸಿದ ನಂತರ ಬೆಳಗಿನ ಜಾವ 4 ಗಂಟೆಗೆ ಯುವತಿಯ ಮನೆಯ ಬಳಿ ರಸ್ತೆಯಲ್ಲಿಯೇ ಬಿಟ್ಟು ಹೋಗಿದ್ದರು. ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಮಾರ್ಚ್ 26 ರಂದು ದೂರು ನೀಡಿದ್ದರು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಆರೋಪಿಗಳ ಪೂರ್ವಾಪರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ :ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ.. ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು