ಬೆಂಗಳೂರು : ನಗರದ ಕಾಮಾಕ್ಷಿಪಾಳ್ಯದ ರಂಗನಾಥಪುರದ ಮನೆಯೊಂದರಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಮೃತ ಮಹಿಳೆಯನ್ನು ಅರುಣಾಕುಮಾರಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ, ಸ್ಥಳ ಪರಿಶೀಲಿಸಿ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ.