ಬೆಂಗಳೂರು : ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪೂರ್ವ ಹೈಲ್ಯಾಂಡ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಚರಿಸ್ಮಾ ಸಿಂಗ್(40) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ಕಳೆದ 15 ವರ್ಷಗಳಿಂದ ಕುಟುಂಬದ ಜೊತೆ ಕೆನಡಾದಲ್ಲಿ ವಾಸವಾಗಿದ್ದರು. ಅವರು ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ ಚಿಕಿತ್ಸೆಗಾಗಿ ಚರಿಷ್ಮಾ ಮತ್ತು ಗಂಡ ಕರಣ್ ಕೆಲ ದಿನಗಳ ಹಿಂದೆಯಷ್ಟೇ ಭಾರತಕ್ಕೆ ಬಂದಿದ್ದರು. ಮಾನಸಿಕ ಖಿನ್ನತೆಯ ಚಿಕಿತ್ಸೆಗೆಂದು ಬಂದಿದ್ದ ದಂಪತಿ ಬೆಂಗಳೂರಿನ ಪೂರ್ವ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಮಧ್ಯಾಹ್ನ ಅಪಾರ್ಟ್ ಮೆಂಟ್ ಆವರಣದಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.