ನೆಲಮಂಗಲ: ಕೆಎಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ದಿನದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಗೃಹಿಣಿ ನೇಣಿಗೆ ಶರಣಾಗಿದ್ದಾರೆ. ನೆಲಮಂಗಲದ ವಿಜಯನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಮೀನಾ (42 ವರ್ಷ) ಆತ್ಮಹತ್ಯೆಗೆ ಶರಣಾದವರು.
ಚಿಂತಾಮಣಿ ತಾಲೂಕಿನ ಟಿ. ದೇವಪಲ್ಲಿಯ ಮೂಲದವರಾದ ಮೃತ ಮಹಿಳೆ ಕಳೆದ 18 ವರ್ಷಗಳ ಹಿಂದೆ ಲಚ್ಚಿರೆಡ್ಡಿ ಎಂಬುವರೊಂದಿಗೆ ಮದುವೆಯಾಗಿದ್ದರು. ಎಂ.ಎ ಪದವೀಧರೆಯಾದ ಮೀನಾ ಕೆಎಎಸ್ ಪರೀಕ್ಷೆ ಪರೀಕ್ಷೆ ಬರೆದಿದ್ದರು. ಪರೀಕ್ಷೆ ಪಾಸಾಗಲು ಸಾಕಷ್ಟು ತಯಾರಿ ನಡೆಸಿದ್ದೂ ಕೂಡ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ರು. ಅಂದಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ಮೇಲಿನ ಶೆಡ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.