ಬೆಂಗಳೂರು :ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆಂದು ಕಟ್ಟಡ ಏರಿದ್ದ ನೇತ್ರ ಎಂಬಾಕೆ ಸಹದ್ಯೋಗಿಗಳ ಸಮಯಪ್ರಜ್ಞೆಯಿಂದ ಬದುಕುಳಿದಿದ್ದಾಳೆ. ಪುಟ್ಟೇನಹಳ್ಳಿ ಆರ್ಬಿ ಲೇಔಟ್ನಲ್ಲಿ ಮಧ್ಯಾಹ್ನದ ವೇಳೆ ಘಟನೆ ನಡೆದಿದೆ. ಪುಟ್ಟೇನಹಳ್ಳಿಯ ಮಾರುತಿನಗರದ ನೇತ್ರಾವತಿ ಮೂಲತಃ ಬನ್ನೂರಿನವರಾಗಿದ್ದು, 2018ರಲ್ಲಿ ಸಿದ್ದರಾಜು ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದರು.
ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನ.. ಪತಿ ಟೈಲರಿಂಗ್ ಕೆಲಸ ಮಾಡುತ್ತಿದ್ರೆ ಹೆಂಡತಿ ಕೊತ್ತನೂರಿನ ದಿಣ್ಣೆ ರಸ್ತೆಯಲ್ಲಿರುವ ಇನ್ಟ್ರಿಂಗ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಇತ್ತೀಚಿಗೆ ದಂಪತಿ ನಡುವೆ ವಿರಸ ಮೂಡಿತ್ತು.
ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ನೇತ್ರಾವತಿ ಕೆಲಸ ಮಾಡುತ್ತಿದ್ದ ಕಟ್ಟಡದ 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದು, ಸಹೋದ್ಯೋಗಿಗಳು ಸರಿಯಾದ ಸಮಯಕ್ಕೆ ಬಂದು ಆಕೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಬೆಂಗಳೂರು ನಗರದ ಅಪಾರ್ಟ್ಮೆಂಟ್ಗಳ ಬಳಿ ಸುಳಿದಾಡುತ್ತಿರುವ ಚಿರತೆ!