ಬೆಂಗಳೂರು:ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ ವಿ ಸದಾನಂದ ಗೌಡ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದರು.
ಬಹುಮತದೊಂದಿಗೆ ಗೆದ್ದೇ ಗೆಲ್ಲುವೆ : ಡಿ.ವಿ ಸದಾನಂದಗೌಡ -
ಬೆಂಗಳೂರಿನ ಸೆಂಟ್ ಜಾನ್ಸ್ ಇನ್ಸ್ಟಿಟ್ಯೂಟ್ನ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ ಸದಾನಂದ ಗೌಡ ಅವರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
![ಬಹುಮತದೊಂದಿಗೆ ಗೆದ್ದೇ ಗೆಲ್ಲುವೆ : ಡಿ.ವಿ ಸದಾನಂದಗೌಡ](https://etvbharatimages.akamaized.net/etvbharat/prod-images/768-512-3357858-thumbnail-3x2-chai.jpg)
ವಿಠಲ್ ಮಲ್ಯ ರಸ್ತೆಯಲ್ಲಿರುವ ಸೇಂಟ್ ಜಾನ್ಸ್ ಇನ್ಸ್ಟಿಟ್ಯೂಟ್ಗೆ ಡಿ ವಿ ಸದಾನಂದ ಗೌಡ ಭೇಟಿ ನೀಡಿ ಮತ ಎಣಿಕೆ ಕೇಂದ್ರ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು ಮತ ಎಣಿಕೆಗೆ ಅಧಿಕಾರಿ ಮತ್ತು ಸಿಬ್ಬಂದಿ ಎಲ್ಲ ವ್ಯವಸ್ಥೆ ಮಾಡಿದ್ದಾರೆ. ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯವಸ್ಥೆ ನೋಡಿ ಬಂದಿದ್ದೇನೆ. ಖಂಡಿತವಾಗಿ ನನಗೆ ಗೆಲ್ಲುವ ವಿಶ್ವಾಸ ಇದೆ. ಮತ ಯಂತ್ರಗಳಲ್ಲಿ ಎಲ್ಲ ಭದ್ರವಾಗಿದೆ. ಎಣಿಕೆ ಮುಗಿದ ಮೇಲೆ ಎಲ್ಲ ಗೊತ್ತಾಗುತ್ತೆ ಎಂದು ತಿಳಿಸಿದರು.
ದೇಶದಲ್ಲಿ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು ಅಂತ ಜನಸಾಮಾನ್ಯರು ಹೇಳುತ್ತಿದ್ದಾರೆ. ಹೀಗಾಗಿ ಬಿಜೆಪಿ ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.