ಬೆಂಗಳೂರು:ಕರೆಂಟ್ ಶಾಕ್ ತಗುಲಿ ಕಾರ್ಮಿಕರಿಬ್ಬರು ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ಬೆಂಗಳೂರಿನ ಕೋಣನಕುಂಟೆಯ ಬಹುಮಹಡಿ ಕಟ್ಟಡವೊಂದರಲ್ಲಿ ನಡೆದಿದೆ. ಅಸ್ಸಾಂ ಮೂಲದ ದಿಲೀಪ್ ಹಾಗೂ ತುಮಕೂರು ಜಿಲ್ಲೆಯ ಮಧುಗಿರಿಯ ರಘು ಮೃತಪಟ್ಟ ಕಾರ್ಮಿಕರು ಎಂದು ಗುರುತಿಸಲಾಗಿದೆ. ಕಟ್ಟಡದಲ್ಲಿ ರಾತ್ರಿ ವೇಳೆ ಎಸ್ಟಿಪಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಶಾಕ್ ತಗುಲಿದೆ. ಇದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬಹುಮಹಡಿ ಕಟ್ಟಡದಲ್ಲಿ ವಿದ್ಯುತ್ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಸಾವು - Death by electrocution
ಬೆಂಗಳೂರಿನಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ಬಹುಮಹಡಿ ಕಟ್ಟಡದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ವಿದ್ಯುತ್ ತಗುಲಿ ಸಾವು
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ:ಆಸ್ಟ್ರೇಲಿಯಾದಲ್ಲಿ ಶಾರ್ಕ್ ದಾಳಿಗೆ ಬಾಲಕಿ ಬಲಿ: 1960 ಬಳಿಕ ಇದೇ ಮೊದಲ ಪ್ರಕರಣ