ಬೆಂಗಳೂರು:ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್ನ ಯಾವುದೇ ಬಿಸಿ ಶಕ್ತಿಸೌಧಕ್ಕೆ ತಟ್ಟಿಲ್ಲ.
ಕರ್ನಾಟಕ ಬಂದ್: ಎಂದಿನಂತೆ ಕಾರ್ಯ ನಿರ್ವಹಿಸುತ್ತಿರುವ ಶಕ್ತಿಕೇಂದ್ರ - ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಬಂದ್ ಆಚರಣೆ
ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ 'ಕರ್ನಾಟಕ ಬಂದ್' ಎಫೆಕ್ಟ್ ವಿಧಾನಸೌಧದ ಮೇಲೇನೂ ಪರಿಣಾಮ ಬೀರಿಲ್ಲ. ಎಂದಿನಂತೆ ಎಲ್ಲಾ ಕೆಲಸ ಕಾರ್ಯಗಳು ಶಕ್ತಿಕೇಂದ್ರದಲ್ಲಿ ಸಹಜವಾಗಿಯೇ ನಡೆಯುತ್ತಿವೆ.
ಎಂದಿನಂತೆ ಕಾರ್ಯನಿರ್ವಹಿಸುತ್ತಿರುವ ಶಕ್ತಿಕೇಂದ್ರ
ಓದಿ: ಕರ್ನಾಟಕ ಬಂದ್ ಬೆಂಬಲಿಸಿ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ
ಪ್ರತಿಭಟನೆ, ರ್ಯಾಲಿಯಿಂದ, ಟ್ರಾಫಿಕ್ ಜಾಮ್‌ನಿಂದ ಸಾರಿಗೆ ವ್ಯವಸ್ಥೆಯಲ್ಲಿ ಸ್ವಲ್ಪ ವ್ಯತ್ಯಯ ಆಗಿರೋ ಕಾರಣಕ್ಕೆ ಕೆಲ ಸಿಬ್ಬಂದಿ ಸ್ವಲ್ಪ ತಡವಾಗಿ ಕಚೇರಿಗೆ ಆಗಮಿಸಿದ್ದಾರೆ. ಉಳಿದಂತೆ ಸಹಜ ರೀತಿಯಲ್ಲಿ ವಿಧಾನಸೌಧ ಸಚಿವಾಲಯ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿಭಟನೆ, ಮುತ್ತಿಗೆ ಯತ್ನ ಹಿನ್ನೆಲೆ ವಿಧಾನಸೌಧ, ವಿಕಾಸಸೌಧ ಬಳಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಉಳಿದಂತೆ ಸಚಿವಾಲಯದ ಕೆಲಸ ಕಾರ್ಯಗಳಲ್ಲಿ ಯಾವುದೇ ರೀತಿಯ ವ್ಯತ್ಯಯವಾಗಿಲ್ಲ.