ಬೆಂಗಳೂರು:ಅನುಮಾನಾಸ್ಪದ ವಸ್ತುಗಳು ಪತ್ತೆಯಾದಾಗ ಅಥವಾ ಬಾಂಬ್ ಸ್ಫೋಟಗಳು ನಡೆದಾಗ ಪೊಲೀಸರು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದರ ಬಗ್ಗೆ ರಿಚ್ಮಂಡ್ ರಸ್ತೆಯಲ್ಲಿರುವ ಕೆಎಸ್ಆರ್ಪಿ ಕವಾಯತು ಮೈದಾನದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪ್ರಾತ್ಯಕ್ಷಿಕೆ ನೀಡಲಾಯಿತು.
ಅನುಮಾನಾಸ್ಪದ ವಸ್ತು ಪತ್ತೆಯಾದಾಗ ಏನ್ ಮಾಡ್ಬೇಕು: ಬಾಂಬ್ ನಿಷ್ಕ್ರಿಯ ದಳದಿಂದ ಪೊಲೀಸರಿಗೆ ಕಾರ್ಯಾಗಾರ
ಪ್ರಮುಖ ನಗರಗಳಲ್ಲಿ ಬಾಂಬ್ ಪತ್ತೆಯಾದಾಗ ಏನು ಮಾಡಬೇಕು, ಯಾವ ರೀತಿ ಪರಿಸ್ಥಿತಿಯನ್ನು ನಿಭಾಯಿಸಬೇಕು. ಯಾವ ಯಾವ ಆಯುಧಗಳಿವೆಯೋ ಅದನ್ನು ಬಾಂಬ್ ನಿಷ್ಕ್ರಿಯಗೊಳಿಸಲು ಹೇಗೆ ಬಳಸಲಾಗುತ್ತದೆ ಎಂಬುದರ ಬಗ್ಗೆ ಕಾರ್ಯಾಗಾರದಲ್ಲಿ ಪೊಲೀಸರಿಗೆ ತಿಳಿಸಿಕೊಡಲಾಯಿತು.
ಇತ್ತೀಚೆಗೆ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಹಿನ್ನೆಲೆ, ಹೈಅಲರ್ಟ್ ಆಗಿರುವ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ರು. ಪ್ರಮುಖ ನಗರಗಳಲ್ಲಿ ಬಾಂಬ್ ಪತ್ತೆಯಾದಾಗ ಏನು ಮಾಡಬೇಕು, ಯಾವ ರೀತಿ ಪರಿಸ್ಥಿತಿಯನ್ನು ನಿಭಾಯಿಸಬೇಕು, ಯಾವ ಯಾವ ಆಯುಧಗಳಿರುತ್ತವೆ, ಅದನ್ನು ಬಾಂಬ್ ನಿಷ್ಕ್ರಿಯ ಗೊಳಿಸಲು ಹೇಗೆ ಬಳಸಲಾಗುತ್ತದೆ ಎಂಬುದರ ಬಗ್ಗೆ ಡೆಮೋ ನೀಡಲಾಯಿತು.
ಈ ಹಿಂದೆ ಬೆಂಗಳೂರಿನ ಮಡಿವಾಳ, ಚರ್ಚ್ ಸ್ಟ್ರೀಟ್ ಹಾಗೂ ಮಲ್ಲೇಶ್ವರಂನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದವು. ಇತ್ತೀಚೆಗಷ್ಟೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಯಲ್ಲಿ ಜೆಎಂಬಿ ಉಗ್ರರ ಬಂಧನವಾಗಿತ್ತು. ಇಂತಹ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಐಎಸ್ ಡಿಯಿಂದ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಗುಪ್ತಚರ ಇಲಾಖೆಯ ಎಡಿಜಿಪಿ ಕಮಲ್ ಪಂತ್, ಸಿಐಡಿ ಮುಖ್ಯಸ್ಥ ಪ್ರವೀಣ್ ಸೂದ್, ಎಲ್ಲಾ ವಿಭಾಗದ ಡಿಸಿಪಿಗಳು ಹಾಗೂ ನೂರಾರು ಮಂದಿ ಪೊಲೀಸರು ಭಾಗಿಯಾಗಿದ್ದರು.