ಆನೇಕಲ್: ನಿನ್ನೆ ಅಂತಾರಾಷ್ಟ್ರೀಯ ಹುಲಿ ದಿನಾಚರಣೆ ಇದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಶಾಲಾ ಮಕ್ಕಳಿಗೆ ಹುಲಿಗಳ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ವಿಶ್ವ ಹುಲಿ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಹುಲಿ ಸಂರಕ್ಷಣೆ ಕುರಿತು ಕಾರ್ಯಾಗಾರ
ಅಂತಾರಾಷ್ಟ್ರೀಯ ಹುಲಿ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಶಾಲಾ ಮಕ್ಕಳಿಗೆ ಹುಲಿಗಳ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಬನ್ನೇರುಘಟ್ಟ ಉದ್ಯಾನದಲ್ಲಿ ಎಂಟು ಹುಲಿ ಮರಿಗಳನ್ನ ಹುಲಿ ಸಫಾರಿಯಲ್ಲಿ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ. ಇಂದಿರಾ ಗಾಂಧಿ ಆವರಣದಲ್ಲಿ ಬಿಟ್ಟಿರುವ ಎಂಟೂ ಹುಲಿಗಳು ಲವಲವಿಕೆಯಿಂದ ಪ್ರಾಣಿ ಪ್ರಿಯರ ಉತ್ಸಾಹವನ್ನು ಇನ್ನಷ್ಟು ಹೆಚ್ಚಿಸಿವೆ. ಹಾಗೆಯೇ ನಿನ್ನೆ ಪಾರ್ಕ್‍ನಲ್ಲಿ ಶಾಲಾ ಮಕ್ಕಳಿಗೆ ರಾಷ್ಟ್ರ ಪ್ರಾಣಿ ಹುಲಿಯ ಚಲನವಲನ, ಹುಲಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವ ಮೂಲಕ ಅಂತಾರಾಷ್ಟ್ರೀಯ ಹುಲಿ ದಿನಕ್ಕೆ ಚಾಲನೆ ನೀಡಲಾಯಿತು.
ಇನ್ನು 100 ವರ್ಷಗಳ ಹಿಂದೆ ಪ್ರಪಂಚದಲ್ಲಿ ಒಂದು ಸಾಕಷ್ಟು ಹುಲಿಗಳು ಜೀವಸುತ್ತಿದ್ದವು. ಸದ್ಯ ಹುಲಿಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿದೆ. ಆದ್ದರಿಂದ ಹುಲಿ ಸಂತತಿಯನ್ನು ಹೇಗೆ ಅಭಿವೃದ್ಧಿ ಪಡಿಸಬೇಕು ಎಂಬುದರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲಾಯಿತು. ಬನ್ನೇರುಘಟ್ಟ ಉದ್ಯಾನದ ವ್ಯಾಪ್ತಿಯಲ್ಲಿ ಸದ್ಯ 29 ಹುಲಿಗಳಿವೆ. ನಿನ್ನೆ ಅಂತಾರಾಷ್ಟ್ರೀಯ ಹುಲಿ ದಿನಾಚರಣೆ ಅಮಗವಾಗಿ ನೂರಾರು ಜನರು ವನ್ಯಧಾಮಗಳಿಗೆ ಭೇಟಿ ನೀಡಿ ಹುಲಿ ವೀಕ್ಷಣೆ ಮಾಡಿದ್ದಾರೆ.