ಬೆಂಗಳೂರು:ಮುಂಬೈನಲ್ಲಿ ನಡೆಯುತ್ತಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ಅಧಿವೇಶನ ಹಾಗೂ ವಿಶ್ವ ಬಂಟರ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂಬೈಗೆ ತೆರಳಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈಗೆ ಪ್ರಯಾಣ ಬೆಳೆಸಿರುವ ಸಿಎಂ, ಸಂಜೆ 7 ಗಂಟೆಗೆ ಮುಂಬೈ ತಲುಪಲಿದ್ದಾರೆ. ಸಂಜೆ 7.30ಕ್ಕೆ ಹುರ್ಬದಲ್ಲಿರುವ ಬಂಟರ ಭವನದಲ್ಲಿ ನಡೆಯಲಿರುವ ಬಂಟರ ಸಮ್ಮಿಲನ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗವಹಿಸಲಿದ್ದಾರೆ.