ಬೆಂಗಳೂರು: ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೋರಿದ 15 ಸಾಧಕರು, 10 ಸಂಸ್ಥೆಗಳು ಹಾಗೂ ವಿಶೇಷ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಐವರು ಶಿಕ್ಷಕರಿಗೆ ಇಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಸಚಿವ ಆಚಾರ್ ಹಾಲಪ್ಪ ಬಸಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಗವೈಕಲ್ಯವನ್ನು ಮೆಟ್ಟಿನಿಂತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಕಲಚೇತನ ವ್ಯಕ್ತಿಗಳು, ವಿಶೇಷ ಶಿಕ್ಷಕರು ಹಾಗೂ ವಿಕಲಚೇತನ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವಂತಹ ಸಂಸ್ಥೆಗಳನ್ನು ಗುರುತಿಸಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಫಲಕ, ನಗದು ನೆನಪಿನ ಕಾಣಿಕೆ ಮುಂತಾದವುಗಳನ್ನು ಒಳಗೊಂಡಿರುತ್ತದೆ. ಈ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದ ಸಚಿವರು, ಶಾಸಕರು ಹಾಗೂ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.