ಕರ್ನಾಟಕ

karnataka

ETV Bharat / state

ಮತ್ಸ್ಯವಾಹಿನಿಗೆ ಚಾಲನೆ; ಮೀನುಗಾರ ಸಮುದಾಯ ಸಮಸ್ಯೆಗಳ ಪರಿಹಾರಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ - ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನ

ಮತ್ಸ್ಯ ವಾಹಿನಿ-ಪರಿಸರ ಸ್ನೇಹಿ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಮತ್ಸ್ಯವಾಹಿನಿಗೆ ಸಿಎಂ ಚಾಲನೆ
ಮತ್ಸ್ಯವಾಹಿನಿಗೆ ಸಿಎಂ ಚಾಲನೆ

By ETV Bharat Karnataka Team

Published : Nov 21, 2023, 7:23 PM IST

ಬೆಂಗಳೂರು: ಮೀನುಗಾರ ಸಮುದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೀನುಗಾರಿಕೆ ವಿಶ್ವವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ ವಿಚಾರ ಮಾಡಲಾಗುವುದು ಎಂದು ತಿಳಿಸಿದರು. ಮೀನುಗಾರ ಮಹಿಳೆಯರಿಗೆ ನೀಡುವ ಸಹಾಯಧನವನ್ನು ಪುರುಷರಿಗೂ ನೀಡಬೇಕು ಎನ್ನುವ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಮೀನು ನಮ್ಮ ಆಹಾರ ಸಂಸ್ಕೃತಿಯ ಪ್ರಮುಖ ಭಾಗ. ಅತ್ಯಂತ ಆರೋಗ್ಯಕಾರಿ ಆಹಾರ. ಮೀನಿನ‌ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ನಮ್ಮ ಸರ್ಕಾರ ಅಗತ್ಯ ಎಲ್ಲಾ ನೆರವನ್ನೂ ನೀಡುತ್ತದೆ. ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗಿನಿಂದಲೂ ಅಧಿವೇಶನದಲ್ಲಿ ಹೋರಾಟ ನಡೆಸಿದ್ದೆ. ಆದರೂ ಹಿಂದಿನ ಸರ್ಕಾರ ಮತ್ತು ಸರ್ಕಾರದಲ್ಲಿದ್ದ ಸಚಿವರು ಪರಿಹಾರ ಒದಗಿಸಲೇ ಇಲ್ಲ ಎಂದು ಆರೋಪಿಸಿದರು.

ರಿಯಾಯ್ತಿ ದರದಲ್ಲಿ ಡೀಸೆಲ್ ಕೊಡುವಂತೆ ನಾವು ಅಧಿವೇಶನದಲ್ಲಿ ಹೋರಾಟ ಮಾಡಿದರೂ ಸರ್ಕಾರ ಕೊಡಲಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೇಡಿಕೆ ಈಡೇರಿಸಿದ್ದೇವೆ. ಮೀನುಗಾರ ಸಮುದಾಯದ ಮಹಿಳೆಯರಿಗೆ ನೀಡಲಾಗುತ್ತಿದ್ದ 50 ಸಾವಿರ ರೂಪಾಯಿ ಸಹಾಯ ಧನವನ್ನು 3 ಲಕ್ಷಕ್ಕೆ ಏರಿಸಿದ್ದು ನಮ್ಮ ಸರ್ಕಾರ. ಮುಂದಿನ ವರ್ಷದಿಂದ ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಆರಂಭವಾಗುತ್ತದೆ ಎಂದು ಸಿಎಂ ಮಾಹಿತಿ ನೀಡಿದರು.

ಸಿಎಂ‌ ಡಿ ಕೆ ಶಿವಕುಮಾರ್ ಎಂದ ಸಚಿವ ಮಂಕಾಳ್ ವೈದ್ಯ:ಸಿದ್ದರಾಮಯ್ಯ ಸಮ್ಮುಖದಲ್ಲಿ ಡಿಕೆ‌ ಶಿವಕುಮಾರ್ ಅವರನ್ನು ಸಿಎಂ ಎಂದು ಕರೆಯುವ ಮೂಲಕ ಸಚಿವ ಮಂಕಾಳ್ ವೈದ್ಯ ವೇದಿಕೆಯಲ್ಲಿ ಇದ್ದವರಿಗೆ ಶಾಕ್ ನೀಡಿದ ಪ್ರಸಂಗ ನಡೆಯಿತು. ವಿಧಾನಸೌಧದ ಬಾಂಕ್ವೆಟ್ ಹಾಲ್​ನಲ್ಲಿ ಮಂಗಳವಾರ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆಯಲ್ಲಿ ಸ್ವಾಗತ ಭಾಷಣ ಮಾಡುವ ಸಂದರ್ಭದಲ್ಲಿ ಮೀನುಗಾರಿಕಾ ಸಚಿವರು ಈ ರೀತಿಯಲ್ಲಿ ಎಡವಟ್ಟು ಮಾಡಿಕೊಂಡರು. ಕಾರ್ಯಕ್ರಮದಲ್ಲಿ ಸ್ವಾಗತಿಸುವ ಭರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳುವ ಬದಲಾಗಿ ಸಿಎಂ ಡಿಕೆ ಶಿವಕುಮಾರ್ ಎಂದು ಉಲ್ಲೇಖಿಸಿದರು. ಬಳಿಕ ತಮ್ಮ ಎಡವಟ್ಟು ಅರಿತುಕೊಂಡ ಮಂಕಾಳ್ ವೈದ್ಯ ತಪ್ಪನ್ನು ಸರಿಪಡಿಸಿಕೊಂಡರು.

ಮತ್ಸ್ಯವಾಹಿನಿಗೆ ಚಾಲನೆ

ಮತ್ಸ್ಯ ವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಕ್ಕೆ ಚಾಲನೆ:ವಿಶ್ವ ಮೀನುಗಾರಿಕೆ ದಿನಾಚರಣೆಯ ಪ್ರಯುಕ್ತ ಮೀನುಗಾರಿಕೆ ಇಲಾಖೆಯ ವತಿಯಿಂದ ವಿಧಾನಸೌಧದ ಭವ್ಯ ಮೆಟ್ಟಿಲು ಬಳಿ ಹಮ್ಮಿಕೊಂಡಿದ ಮತ್ಸ್ಯ ವಾಹಿನಿ-ಪರಿಸರ ಸ್ನೇಹಿ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಫಲಾನುಭವಿಗಳಿಗೆ 300 ಮತ್ಸ್ಯ ವಾಹಿನಿ ತ್ರಿಚಕ್ರ ವಾಹನ ನೀಡಲು ಸರ್ಕಾರ ಮುಂದಾಗಿದ್ದು, ಈ ಪೈಕಿ ಸದ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ 150 ಮತ್ಸ್ಯ ವಾಹಿನಿಗಳಿಗೆ ಇಂದು ಚಾಲನೆ ನೀಡಲಾಗಿದೆ. ಉಳಿದಂತೆ ಹಂತ ಹಂತವಾಗಿ ಮತ್ಸ್ಯ ವಾಹಿನಿಯನ್ನು ವಿತರಿಸಲಾಗುವುದು. ಮತ್ಸ್ಯ ವಾಹಿನಿ ಮೂಲಕ ತಾಜಾ ಮೀನುಗಳನ್ನು ಮಾರಾಟ ಮಾಡಲಾಗುವುದು.

ಇದನ್ನೂ ಓದಿ:ನೀರಾವರಿ ಪಂಪ್‌ಸೆಟ್​ಗಳಿಗೆ 7ತಾಸು ವಿದ್ಯುತ್​​, ಬೇಸಿಗೆಯಲ್ಲಿ ಪವರ್​ ಸಮಸ್ಯೆ ಇರಲ್ಲ; ಸಚಿವ ಜಾರ್ಜ್​

ABOUT THE AUTHOR

...view details