ಕರ್ನಾಟಕ

karnataka

ETV Bharat / state

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅಕ್ಟೋಬರ್ 24 ರಂದು ಲಿಖಿತ ಪರೀಕ್ಷೆ - Written examination on October 24 for the post of Civil Police Constable

ರಾಜ್ಯ ಪೊಲೀಸ್ ಇಲಾಖೆಯು 3,533 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಕ್ಕೆ ಅಕ್ಟೋಬರ್ 24ರಂದು ಲಿಖಿತ ಪರೀಕ್ಷೆ ನಡೆಸಲಿದೆ.

Civil Police Constable
Civil Police Constable

By

Published : Oct 14, 2021, 6:32 AM IST

ಬೆಂಗಳೂರು: ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ & ಮಹಿಳೆ) 3,533 ಹುದ್ದೆಗಳ ನೇಮಕಾತಿಗಾಗಿ ಸುಮಾರು 43,800 ಅಭ್ಯರ್ಥಿಗಳಿಗೆ ಅಕ್ಟೋಬರ್ 24 ರಂದು ಬೆಂಗಳೂರು ನಗರದಲ್ಲಿನ 76 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮಧ್ಯಾಹ್ನ 12 ಗಂಟೆಯಿಂದ 1.30 ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ. ಈಗಾಗಲೇ ಅಭ್ಯರ್ಥಿಗಳಿಗೆ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್ www.recruitment.ksp.gov.in ನಲ್ಲಿ ಬಿಡುಗಡೆ ಮಾಡಲಾಗಿದೆ.

ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಸರಿಯಾದ ಸಮಯಕ್ಕೆ ಸೂಚಿಸಿದ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ಪರೀಕ್ಷೆ ಬರೆಯುವಂತೆ ತಿಳಿಸಲಾಗಿದೆ. ಈ ಕುರಿತಾದ ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ವೀಕ್ಷಿಸಿ ಎಂದು ಇಲಾಖೆ ಹೇಳಿದೆ.

ABOUT THE AUTHOR

...view details