ಬೆಂಗಳೂರು:ಪೌರತ್ವ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್‌ನಲ್ಲಿ ಮೃತಪಟ್ಟ ಇಬ್ಬರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲು ವಿಪಕ್ಷ ನಾಯಕಸಿದ್ದರಾಮಯ್ಯ ಮಂಗಳೂರಿಗೆ ತೆರಳಲು 2 ಸಾರಿ ಪ್ರಯತ್ನಿಸಿದರು. ಆದರೆ, ಅವರ ಭೇಟಿಗೆ ಪೊಲೀಸರು ನಿರ್ಬಂಧಿಸಿದ್ದರು.ಈ ಹಿನ್ನೆಲೆ ನಾಳೆ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.
ಪೌರತ್ವ ಕಾಯ್ದೆ ಖಂಡಿಸಿ ಮಂಗಳೂರಿನಲ್ಲಿ ಸಾಕಷ್ಟು ಗಲಾಟೆ ನಡೆದು, ಗೋಲಿಬಾರ್‌ನಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ ಕೊಡಲು ಮುಂದಾಗಿದ್ದರು. ಆದರೆ, ಇವರ ಯತ್ನವನ್ನು ಸರ್ಕಾರ ಎರಡು ಸಾರಿ ತಡೆದಿದೆ. ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ತೆರಳಬೇಕಿತ್ತು. ಆದರೆ, ಮಂಗಳೂರಿನಲ್ಲಿ ವಿಶೇಷ ವಿಮಾನ ಇಳಿಯಲು ಅನುಮತಿ ನಿರಾಕರಿಸಲಾಗಿತ್ತು. ಆದ್ದರಿಂದ ಸಿದ್ದರಾಮಯ್ಯ ಅವರ ಪ್ರವಾಸ ರದ್ದಾಗಿತ್ತು.