ಬೆಂಗಳೂರು: ಅನಗತ್ಯವಾಗಿ ನಮ್ಮನ್ನು ಪ್ರಚೋದಿಸಿ ಕೆರಳಿಸಿ, ನಮ್ಮಿಂದಲೇ ನಮ್ಮ ಪಕ್ಷದ ವರ್ಚಸ್ಸು ಕಡಿಮೆಯಾಗುವಂತಹ ನಮ್ಮ ಎದುರಾಳಿಗಳ ತಂತ್ರಕ್ಕೆ ನಾವು ಬಲಿಯಾಗದಂತೆ ಸ್ವಯಂ ಸಹನೆ ಹಾಗೂ ಸಂಯಮವನ್ನು ತೋರಿಸುವುದು ಈ ಗಳಿಗೆಯ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಾಜಿ ಶಾಸಕ, ಜೆಡಿಎಸ್ ಮುಖಂಡ ವೈಎಸ್‌ವಿ ದತ್ತಾ ಹೇಳಿದ್ದಾರೆ.
ಕಾರ್ಯಕರ್ತರಿಗೆ ಬರೆದಿರುವ ಪತ್ರವನ್ನು ಟ್ವೀಟ್ ಮೂಲಕ ಹಂಚಿಕೊಂಡಿರುವ ಅವರು, ನಮ್ಮ ಪಕ್ಷದ ಕಾರ್ಯಕರ್ತರು ಸಂಯಮದಿಂದ ವರ್ತಿಸಿ ತಾಳ್ಮೆ ಕಾಪಾಡಿಕೊಂಡು ಹೋಗಬೇಕು ಎಂದು ಮನವಿ ಮಾಡಿದ್ದಾರೆ.