ಬೆಂಗಳೂರು: ಸರ್ಕಾರ ರಚನೆ ಮಾಡಲು ಬಿಜೆಪಿ ವಿಳಂಬ ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಸರ್ಕಾರ ರಚನೆಗೆ ಯಾವುದೇ ಗೊಂದಲ ಇಲ್ಲ. ಕೆಲ ತಾಂತ್ರಿಕ ಕಾರಣದಾಗಿ ಸರ್ಕಾರ ರಚನೆ ವಿಳಂಬವಾಗುತ್ತಿದೆ. ಯಡಿಯೂರಪ್ಪ ಅವರೇ ನಮ್ಮ ಮುಖ್ಯಮಂತ್ರಿಗಳು ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಮಾಧ್ಯಮಗಳಿಗೆ ತಿಳಿಸಿದರು.
ಸರ್ಕಾರ ರಚನೆಯಲ್ಲಿ ಯಾವುದೇ ಗೊಂದಲ ಇಲ್ಲ.. ರೇಣುಕಾಚಾರ್ಯ ಭರವಸೆ ಮಾತು!
ಯಡಿಯೂರಪ್ಪ ಅವರೇ ನಮ್ಮ ಮುಖ್ಯಮಂತ್ರಿ ಹಾಗೂ ಸರ್ಕಾರ ರಚನೆಯಲ್ಲಿ ಯಾವುದೇ ರೀತಿಯ ವಿಳಂಬ ನಾವು ಮಾಡುತ್ತಿಲ್ಲ , ಮತ್ತೊಮ್ಮೆ ಯೋಚಿಸಿ ಸರ್ಕಾರ ಯಾವಾಗ ರಚಿಸಬೇಕು ಎಂಬುದನ್ನು ನಿರ್ಧರಿಸುತ್ತೇವೆ ಎಂದು ರೇಣುಕಾಚಾರ್ಯ ಹೇಳಿದರು.
ಈಗಾಗಲೇ ಸಮ್ಮಿಶ್ರ ಸರ್ಕಾರ ಪತನವಾಗಿ ಮುಖ್ಯಮಂತ್ರಿಗಳು ರಾಜಿನಾಮೆ ಕೊಟ್ಟಾಗಿದೆ. ಆದರೆ, ಕೆಲವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗುವ ಬಗ್ಗೆ ಗೊಂದಲ ಸೃಷ್ಟಿ ಮಾಡತ್ತಿದ್ದಾರೆ. ಇದೆಲ್ಲ ಸುಳ್ಳು ಸುದ್ದಿ, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದರು. ಕೇಂದ್ರದ ವರಿಷ್ಠರು ಹಾಗೂ ರಾಜ್ಯದ ಮುಖಂಡರು ಒಟ್ಟಾಗಿ 2018ರ ವಿಧಾನಸಭಾ ಚುನಾವಣೆ ಸಂಧರ್ಭದಲ್ಲೇ ಯಡಿಯೂರಪ್ಪನವರೇ ಮುಖ್ಯಮಂತ್ರಿ ಎಂದು ನಿರ್ಧರಿಸಿ ಘೋಷಣೆಯಾಗಿತ್ತು. ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯೂ ಯಡಿಯೂರಪ್ಪ ನೇತೃತ್ವದಲ್ಲೇ ನಡೆದಿದೆ. ಕೇಂದ್ರದಲ್ಲೂ ಯಡಿಯೂರಪ್ಪ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದಿದ್ದಾರೆ.
ಇನ್ನು ತಾವು ಸಚಿವ ಸ್ಥಾನದ ಆಕಾಂಕ್ಷಿಗಳೇ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಎಲ್ಲವನ್ನೂ ರಾಷ್ಟ್ರ ಹಾಗೂ ರಾಜ್ಯದ ಮುಖಂಡರು ತೀರ್ಮಾನಿಸುತ್ತಾರೆ ಎಂದರು.