ಕರ್ನಾಟಕ

karnataka

ETV Bharat / state

ಕೇಂದ್ರ ಮಾರ್ಗಸೂಚಿಯನ್ವಯ ಆರ್ಥಿಕ ಚಟುವಟಿಕೆ ಪ್ರಾರಂಭಿಸಲು ಸಿಎಂ ಸೂಚನೆ - ಆರ್ಥಿಕ ಚಟುವಟಿಕೆ ಪ್ರಾರಂಭಿಸಲು ಸಿಎಂ ಸೂಚನೆ

ಕೇಂದ್ರ ಅನುಮತಿ ನೀಡಿರುವ ಚಟುವಟಿಕೆಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಪ್ರಾರಂಭಿಸುವಂತೆ ಸಿಎಂ ಬಿ.ಎಸ್​​ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

yadiyurappa video conference with ministers
ಸಿಎಂ ಸೂಚನೆ

By

Published : May 2, 2020, 1:39 PM IST

ಬೆಂಗಳೂರು: ಕೋವಿಡ್ 19 ನಿಯಂತ್ರಣ ಹಾಗೂ ಲಾಕ್ ಡೌನ್ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಈ ವೇಳೆ ಸಿಎಂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಸೂಚನೆ ನೀಡಿದರು. ಕಂಟೇನ್ಮೆಂಟ್​​ ಝೋನ್ ಹೊರತುಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ತಿಳಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮವಹಿಸಲು ಸೂಚಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆಎಸ್ಆರ್​​ಟಿಸಿ ಬಸ್ ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಯಿತು. ಹೊರ ಜಿಲ್ಲೆಗಳಿಂದ ಆಗಮಿಸಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡುವಂತೆ ತಿಳಿಸಲಾಯಿತು.
ಲಾಕ್​​ಡೌನ್ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂತಿರುಗಲು ಒಂದು ದಿನಕ್ಕೆ, ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನಿಸಲಾಯಿತು.
ಇದೇ ವೇಳೆ ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.

For All Latest Updates

ABOUT THE AUTHOR

...view details