ಬೆಂಗಳೂರು : ಲಿಂಗಾಯತ ವೀರಶೈವ ಧರ್ಮ ವಿಭಜನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಬಿಜೆಪಿ ಸಭೆಯಲ್ಲಿ ಬಿಎಸ್ ವೈ ಭಾಗಿ:ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ಪ್ರಾರಂಭಿಸಿದ್ದು, ಚುನಾವಣಾ ತಂತ್ರಗಾರಿಕೆ ರೂಪಿಸಲು ಮಾಜಿ ಸಿಎಂ ಬಿ.ಎಸ್.ವೈ ಅಖಾಡಕ್ಕಿಳಿದಿದ್ದಾರೆ. ಮೊನ್ನೆಯಷ್ಟೇ ಎರಡು ಉನ್ನತ ಸ್ಥಾನಗಳಿಗೆ ನೇಮಕವಾಗಿದ್ದ ಯಡಿಯೂರಪ್ಪ, ಇಂದು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳ ಸಭೆಯಲ್ಲಿ ಭಾಗಿಯಾದರು.
ಇದನ್ನೂ ಓದಿ :ಲಿಂಗಾಯತ ಪ್ರತ್ಯೇಕ ಧರ್ಮ ವಿಭಜನೆಯ ಸತ್ಯ ಇಡೀ ಜಗತ್ತಿಗೆ ಗೊತ್ತು: ಸಿಎಂ ಬೊಮ್ಮಾಯಿ