ಯಲಹಂಕ (ಬೆಂಗಳೂರು):ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆಯನ್ನು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟನೆ ಮಾಡಿದ್ದಾರೆ.
ಯಲಹಂಕದ ಡೈರಿ ಸರ್ಕಲ್ ಬಳಿಯ ಮೇಜರ್ ಉನ್ನಿಕೃಷ್ಣನ್ ರಸ್ತೆಯಲ್ಲಿ 34 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಮೇಲ್ಸೇತುವೆಗೆ ವೀರ ಸಾವರ್ಕರ್ ಎಂದು ನಾಮಕರಣ ಮಾಡಲಾಗಿತ್ತು. ಬಿಬಿಎಂಪಿ ವೀರ ಸಾವರ್ಕರ್ ಹೆಸರಿಗೆ ಅನುಮೋದನೆ ಸಹ ನೀಡಿತ್ತು. ಆದರೆ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ವೀರ ಸಾವರ್ಕರ್ ನಾಮಕರಣಕ್ಕೆ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ಮುಂಡಲಾಗಿತ್ತು. ಬಳಿಕ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ ಹಿನ್ನೆಲೆ ಕಾರ್ಯಕ್ರಮ ಮುಂದೂಡಲಾಯಿತು. ಮೂರನೇ ಬಾರಿ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮ ನಿಗದಿ ಮಾಡಲಾಗಿತ್ತು. ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಉದ್ಘಾಟನೆ ನೆರವೇರಿಸಿದ್ದಾರೆ.