ಬೆಂಗಳೂರು: ನಾಡಿನೆಲ್ಲೆಡೆ ಸಡಗರ ಸಂಭ್ರಮದಿಂದ ದೀಪಾವಳಿ ಆಚರಿಸಲಾಗುತ್ತಿದೆ. ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಿವಾಸದಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಳಿ ವಯಸ್ಸಿನಲ್ಲೂ ಅತ್ಯಂತ ಉತ್ಸಾಹದಿಂದ ಬಿಎಸ್ವೈ ಗೋ ಪೂಜೆ ನೆರವೇರಿಸಿ ಬೆಳಕಿನ ಹಬ್ಬವನ್ನು ಸಂಭ್ರಮಿಸಿದರು.
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮುಂಜಾನೆಯಿಂದಲೇ ಮನೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಗೋಪೂಜೆ ಮಾಡಿದರು.