ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರೆ ಪರಿಹಾರಕ್ಕಾಗಿ 1,200 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನತೆ ಪರವಾಗಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಪರಿಹಾರ ಹಣ ಬಿಡುಗಡೆ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ 1,200 ಕೋಟಿ ರೂಪಾಯಿ ಮುಂಗಡ ಹಣವನ್ನು ಘೋಷಣೆ ಮಾಡಿದೆ. ನೆರೆ ಪರಿಹಾರಕ್ಕಾಗಿ ಅನುದಾನ ನೀಡುವ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಬೆಂಬಲ ನrಡಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆ ಅರ್ಪಿಸುವುದಾಗಿ ತಿಳಿಸಿದ್ದಾರೆ.