ಬೆಂಗಳೂರು:14 ತಿಂಗಳ ಬಳಿಕ ಕೊನೆಗೂ ದೋಸ್ತಿ ಸರ್ಕಾರ ಪತನವಾಗಿದೆ. ಸರ್ಕಾರ ರಚನೆಗೆ ಬಿಜೆಪಿ ಸಕಲ ಸಿದ್ಧತೆ ನಡೆಸಿದ್ದು, ಬಿ.ಎಸ್. ಯಡಿಯೂರಪ್ಪ ಅವರ ಪದಗ್ರಹಣವು ಜ್ಯೋತಿಷಿಗಳ ಸಲಹೆಯಂತೆ ನಡೆಯಲಿದೆಯಂತೆ.
ಜ್ಯೋತಿಷಿಗಳು ಎರಡು ಮುಹೂರ್ತ ನೀಡಿದ್ದು, ಗುರುವಾರ ಮಧ್ಯಾಹ್ನ 3.28 ನಿಮಿಷದಿಂದ 3.48 ನಿಮಿಷದವರೆಗೆ ಅಥವಾ ಶುಕ್ರವಾರ ಸಂಜೆ 4 ಗಂಟೆಗೆ ಪ್ರಮಾಣವಚನ ಸ್ವೀಕರಿಸುವಂತೆ ತಿಳಿಸಿದ್ದಾರೆ. ಯಡಿಯೂರಪ್ಪ ಗುರುವಾರದ ಮುಹೂರ್ತದಲ್ಲಿ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.