ಕರ್ನಾಟಕ

karnataka

ETV Bharat / state

ಕೇಂದ್ರ ಬಜೆಟ್ ಬಸವಳಿದ​ ಅರ್ಥ ವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿ : ಯಡಿಯೂರಪ್ಪ - Central Budget 2021

ಬೆಂಗಳೂರು ಮೆಟ್ರೋ ಯೋಜನೆಗೆ 14,778 ಕೋಟಿ ರೂ. ಪ್ರಕಟಿಸಲಾಗಿದೆ. ಇದರಿಂದ 58 ಕಿ.ಮೀ. ಹೊಸ ಮಾರ್ಗ ನಿರ್ಮಿಸಲು ಸಾಧ್ಯ. ಇದು ಕರ್ನಾಟಕಕ್ಕೆ ನಮ್ಮವರೇ ಆದ ಅರ್ಥ ಸಚಿವರು ನೀಡಿರುವ ಕೊಡುಗೆಯಾಗಿದೆ..

ddd
ಕೇಂದ್ರ ಬಜೆಟ್ ಬಗ್ಗೆ ಯಡಿಯೂರಪ್ಪ ಅಭಿಪ್ರಾಯ

By

Published : Feb 1, 2021, 3:54 PM IST

Updated : Feb 1, 2021, 4:14 PM IST

ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2021-22ರ ಕೇಂದ್ರ ಬಜೆಟ್ ಬಸವಳಿದಿರುವ ಭಾರತೀಯ ಅರ್ಥ ವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವ್ಯಾಖ್ಯಾನಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, 2021-22ನೇ ಸಾಲಿನ ಕೇಂದ್ರ ಬಜೆಟ್ ಅರ್ಥ ವ್ಯವಸ್ಥೆಯ ಪುನಶ್ಚೇತನದೊಂದಿಗೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಪ್ರದರ್ಶಿಸಿದೆ.

ಇದನ್ನು ನಾನು ಮನ:ಪೂರ್ವಕವಾಗಿ ಸ್ವಾಗತಿಸುತ್ತೇನೆ. ಸಾಂಕ್ರಾಮಿಕ ರೋಗದ ನಡುವೆ ಇದಕ್ಕಿಂತ ಉತ್ತಮ ಬಜೆಟ್ ನಿರೀಕ್ಷಿಸುವುದು ಅಸಾಧ್ಯ. ರೋಗ ನಿಯಂತ್ರಣದ ಜೊತೆಗೆ ಅರ್ಥ ವ್ಯವಸ್ಥೆಯ ಪುನರುಜ್ಜೀವನಕ್ಕೆ ಅಗತ್ಯ ಕಾರ್ಯತಂತ್ರವನ್ನು ಕೇಂದ್ರ ವಿತ್ತ ಸಚಿವೆ ಬಜೆಟ್‍ನಲ್ಲಿ ಪ್ರಕಟಿಸಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ಯಡಿಯೂರಪ್ಪ ಅಭಿಪ್ರಾಯ

ಕೋವಿಡ್ ಸಾಂಕ್ರಾಮಿಕ ರೋಗದ ನಿವಾರಣೆಗೆ ಕೈಗೊಂಡಿರುವ ಲಸಿಕೆ ಅಭಿಯಾನಕ್ಕೆ 35,000 ಕೋಟಿ ರೂ. ಒದಗಿಸಿದ್ದು, ಇನ್ನೂ ಹೆಚ್ಚಿನ ಹಣದ ಅಗತ್ಯ ಬಿದ್ದಲ್ಲಿ ಒದಗಿಸುವುದಾಗಿ ಕೇಂದ್ರ ಸಚಿವೆ ತಿಳಿಸಿರುವುದು ಸ್ವಾಗತಾರ್ಹ. ಕೃಷಿ ಕ್ಷೇತ್ರದ ಬಲವರ್ಧನೆ, ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಕೈಗಾರಿಕಾ ಬೆಳವಣಿಗೆಗೆ ಈ ಬಜೆಟ್‍ನಲ್ಲಿ ವಿಶೇಷ ಗಮನ ನೀಡಲಾಗಿದೆ.

ರಾಷ್ಟ್ರೀಯ ರೈಲ್ವೆ ಯೋಜನೆಯಡಿ 1.10 ಲಕ್ಷ ಕೋಟಿ ರೂ. ಒದಗಿಸಿದ್ದು, ಇದರಲ್ಲಿ ಬಂಡವಾಳ ವೆಚ್ಚಕ್ಕೆ 1.07 ಲಕ್ಷ ಕೋಟಿ ರೂ. ಒದಗಿಸಿರುವುದು ಸ್ವಾಗತಾರ್ಹ. ಬೆಂಗಳೂರು ಮೆಟ್ರೋ ಯೋಜನೆಗೆ 14,778 ಕೋಟಿ ರೂ. ಪ್ರಕಟಿಸಲಾಗಿದೆ.

ಇದರಿಂದ 58 ಕಿ.ಮೀ. ಹೊಸ ಮಾರ್ಗ ನಿರ್ಮಿಸಲು ಸಾಧ್ಯ. ಇದು ಕರ್ನಾಟಕಕ್ಕೆ ನಮ್ಮವರೇ ಆದ ಅರ್ಥ ಸಚಿವರು ನೀಡಿರುವ ಕೊಡುಗೆಯಾಗಿದೆ ಎಂದು ಸಿಎಂ ಯಡಿಯೂರಪ್ಪ ಶ್ಲಾಘಿಸಿದ್ದಾರೆ.

Last Updated : Feb 1, 2021, 4:14 PM IST

ABOUT THE AUTHOR

...view details