ಬೆಂಗಳೂರು : ಮುಂಬರುವ ಚುನಾವಣೆಯಲ್ಲಿ 130 ರಿಂದ 135 ಸ್ಥಾನ ಗೆದ್ದು ಸಿದ್ದರಾಮಯ್ಯರನ್ನು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕೂರಿಸುತ್ತೇನೆ, ಇಲ್ಲದಿದ್ದರೆ ನನ್ನನ್ನು ಯಡಿಯೂರಪ್ಪ ಎಂದು ಕರೆಯಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಸಭಾತ್ಯಾಗ ಮಾಡಿದ್ದಕ್ಕೆ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಫುಲ್ ಗರಂ ಆದ ಸಿಎಂ, ಏನು ನೈತಿಕತೆ ಇದೆ ಎಂದು ಅವರು ಪ್ರಶ್ನೆ ಮಾಡುವುದು, ಅವರ ತಲೆ, ಸದನಕ್ಕೆ ಸಿದ್ದರಾಮಯ್ಯ ಬರಲಿ, ವಿಧಾನಸಭೆಯಲ್ಲಿ ಸಿಡಿ ವಿಷಯದ ಬಗ್ಗೆ ಚರ್ಚೆಯಾಗಲಿ. ಅವರು ಏನು ಸಲಹೆ ಕೊಡುತ್ತಾರೋ ಅದರ ಆಧಾರದ ಮೇಲೆ ತನಿಖೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.