ಬೆಂಗಳೂರು:ಈಶ್ವರಪ್ಪ ರಾಜೀನಾಮೆಗೆ ಪಟ್ಟುಹಿಡಿದು ಉಭಯ ಸದನಗಳಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಕೈಬಿಡುವಂತೆ ಮನವೊಲಿಸುವ ಪ್ರಯತ್ನ ಸಫಲವಾಗಲಿಲ್ಲ. ನಾಳೆ ಮತ್ತೆ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಅಶೋಕ್ ಸೇರಿದಂತೆ ನಾವೆಲ್ಲಾ ಎರಡು ಗಂಟೆ ಕಾಲ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರನ್ನು ವಿನಂತಿ ಮಾಡಿಕೊಂಡೆವು.