ಕರ್ನಾಟಕ

karnataka

ETV Bharat / state

ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್.. ಅಕ್ಟೋಬರ್ ಮೊದಲ ವಾರದಲ್ಲಿ ಮಳೆ ಪ್ರಮಾಣ ಕಡಿಮೆ - Yellow Alert across Dakshina Kannada district

ಉತ್ತರ ಒಳನಾಡಿನಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ. 28 ಹಾಗೂ 30ರವರೆಗೆ ಹಗುರದಿಂದ ಸಾಧಾರಣ, ದಕ್ಷಿಣ ಒಳನಾಡಿನಲ್ಲಿ ಸೆ.28 ರಿಂದ 30ರವರೆಗೆ ಹಗುರದಿಂದ ಸಾಧಾರಣ ಹಾಗೂ 29 ರಂದು ಬಹುತೇಕ ಎಲ್ಲಾ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ..

ಹವಾಮಾನ ವರದಿ
Weather Report

By

Published : Sep 28, 2020, 7:33 PM IST

ಬೆಂಗಳೂರು :ಇಂದು ರಾಜ್ಯದ ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿ ಎಸ್ ಪಾಟೀಲ್ ತಿಳಿಸಿದರು.

ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್

ಚಾಮರಾಜನಗರ, ಮೈಸೂರು, ಹಾಸನ, ಬೆಂಗಳೂರು, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಂಗಳೂರಿನಲ್ಲಿ ಸೆ. 28 ಹಾಗೂ 29 ರಂದು ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ. 28 ಹಾಗೂ 30ರವರೆಗೆ ಹಗುರದಿಂದ ಸಾಧಾರಣ, ದಕ್ಷಿಣ ಒಳನಾಡಿನಲ್ಲಿ ಸೆ.28 ರಿಂದ 30ರವರೆಗೆ ಹಗುರದಿಂದ ಸಾಧಾರಣ ಹಾಗೂ 29 ರಂದು ಬಹುತೇಕ ಎಲ್ಲಾ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

ಗದಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಳೆ ಕಡಿಮೆಯಾಗಿದೆ. ಜೂನ್‌ನಿಂದ ಸೆಪ್ಟೆಂಬರ್ 23ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗಿದೆ. ಅಕ್ಟೋಬರ್ 1ರವರೆಗೆ ಸಾಧಾರಣ ಮಳೆಯಾಗಲಿದೆ. ಆದರೆ, ಅ.2ರಿಂದ ಅ.8ರವರೆಗೆ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಸಿ ಎಸ್ ಪಾಟೀಲ್ ತಿಳಿಸಿದರು.

ABOUT THE AUTHOR

...view details