ಕರ್ನಾಟಕ

karnataka

ETV Bharat / state

ಮುಂದಿನ 4 ದಿನ ಮುಂದುವರೆಯಲಿರುವ ವರ್ಷಧಾರೆ ; ಬೆಂಗಳೂರಿಗೆ ಯೆಲ್ಲೋ ಅಲರ್ಟ್! - ಬೆಂಗಳೂರಿನಲ್ಲಿ ಭಾರೀ ಮಳೆ

ಬೆಂಗಳೂರಿನಲ್ಲಿ ಮುಂದಿನ 4 ದಿನ ಮಳೆ ಮುಂದುವರೆಯಲಿದೆ. ಹವಾಮಾನ ಇಲಾಖೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ಘೋಷಿಸಿದೆ..

Yellow alert announced to Bengaluru, Heavy rain in Bengaluru, Bengaluru rain news, ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ, ಬೆಂಗಳೂರಿನಲ್ಲಿ ಭಾರೀ ಮಳೆ, ಬೆಂಗಳೂರು ಮಳೆ ಸುದ್ದಿ,
ಬೆಂಗಳೂರಿಗೆ ಯೆಲ್ಲೋ ಅಲರ್ಟ್

By

Published : May 10, 2022, 2:06 PM IST

ಬೆಂಗಳೂರು :ಅಸಾನಿ ಚಂಡಮಾರುತ ಪರಿಣಾಮ ಕಳೆದ ಕೆಲ ದಿನಗಳಿಂದ ನಗರದ ಹಲವು ಬಡಾವಣೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇಂದು ಕೂಡ ನಗರದಲ್ಲಿ ಮೋಡ ಕವಿದ ವಾತವರಣವಿದ್ದು, ಸೈಕ್ಲೋನ್ ಪರಿಣಾಮ ನಗರದಲ್ಲಿ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರೆಯಲಿದೆ. ಇಂದು ಗುಡುಗು, ಮಿಂಚು ಸಹಿತ ಭಾರಿ ಮಳೆಯಾದ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹೆಚ್ಚುವರಿ ಮಳೆ : ಮಾರ್ಚ್ 1ರಿಂದ ಮೇ 9ರವರೆಗೆ ನಗರದಲ್ಲಿ ವಾಡಿಕೆಯಂತೆ 72 ಮಿಲಿ ಮೀಟರ್ ಬದಲಾಗಿ 125 ಮಿಲಿ ಮೀಟರ್ ಮಳೆ ಸುರಿದಿದೆ. ನಿನ್ನೆ ರಾತ್ರಿ 8.45ಕ್ಕೆ ಆರಂಭವಾದ ಮಳೆ ಅರ್ಧ ಗಂಟೆ ಕಾಲ ಜೋರಾಗಿ ಸುರಿದಿದೆ. ತಡ ರಾತ್ರಿವರೆಗೂ ಜಿಟಿ ಜಿಟಿ ಮಳೆಯಾಗಿದೆ. ಗುಡುಗು ಮಿಂಚಿನ ಮಳೆಗೆ ಹಲವು ರಸ್ತೆಗಳು ಹೊಳೆಯಾಗಿ ಮಾರ್ಪಟ್ಟಿದ್ದವು.

ಓದಿ:ಉದ್ಘಾಟನೆಯಾಗಿ 2 ದಿನವಷ್ಟೇ.. ಸಮುದ್ರದ ಅಲೆಗಳ ರಭಸಕ್ಕೆ ಕಿತ್ಕೊಂಡ್ಹೋದ ರಾಜ್ಯದ ಪ್ರಥಮ ಫ್ಲೋಟಿಂಗ್ ಬ್ರಿಡ್ಜ್!

ಇನ್ನೂ ರಸ್ತೆಗಳ ಮೇಲೆ 2-3 ಅಡಿ ನೀರು ನಿಂತಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಪ್ರಮುಖ ರಸ್ತೆಗಳಲ್ಲಿರುವ ಮರದ ಕೊಂಬೆಗಳು ಮುರಿದುಬಿದ್ದವು. ವಿದ್ಯುತ್ ಸರಬರಾಜು ಸ್ಥಗಿತವಾಗಿದ್ದರಿಂದ ನಗರದ ಹಲವು ಬಡಾವಣೆಗಳಲ್ಲಿನ ನಿವಾಸಿಗಳು ಪರದಾಡಿದರು. ಮ್ಯಾನ್‌ಹೋಲ್‌ಗಳು ಉಕ್ಕಿಹರಿದ ಪರಿಣಾಮ ರಸ್ತೆಗಳ ಮೇಲೆ ಕೊಳಚೆ ನೀರು ಹರಿಯುತ್ತಿರುವುದು ಅಲ್ಲಲ್ಲಿ ಕಂಡು ಬಂದಿತು.

ಗುಡುಗು-ಮಿಂಚು ಸಹಿತ ಮಳೆ :ಚಾಮರಾಜಪೇಟೆ, ಜಯನಗರ, ಜೆ.ಪಿ.ನಗರ, ಮೈಸೂರು ರಸ್ತೆ, ವಿಶ್ವೇಶ್ವರಪುರ, ಮೆಜೆಸ್ಟಿಕ್, ಕೆ.ಆರ್‌.ಮಾರುಕಟ್ಟೆ, ವಿಜಯನಗರ, ನಾಗರಬಾವಿ, ಹೆಬ್ಬಾಳ, ಬಸವೇಶ್ವರನಗರ, ರಾಜಾಜಿನಗರ, ಕೆಂಗೇರಿ, ಕೋರಮಂಗಲ ಸೇರಿ ನಗರದ ಹಲವು ಬಡಾವಣೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸುರಿದಿದೆ. ಇಂದು ಸಹ ಗುಡುಗು-ಮಿಂಚು ಮಳೆ ಸುರಿಯಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ABOUT THE AUTHOR

...view details