ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನಗರದಲ್ಲಿ ನಿನ್ನೆಯಿಂದ ಮಳೆಯಾಗುತ್ತಿದೆ. ರಾಜಧಾನಿಯಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಭಾರಿ ಮಳೆಯಾಗಲಿರುವ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಭಾರಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಯೆಲ್ಲೋ ಅಲರ್ಟ್
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Yellow Alert
ಆರ್.ಆರ್.ನಗರ, ಪುಲಿಕೇಶಿನಗರ, ಕೋರಮಂಗಲ, ತಾವರಕೆರೆ, ಕೆ.ಆರ್ ಮಾರುಕಟ್ಟೆ, ಮೆಜೆಸ್ಟಿಕ್, ಶಿವನಂದ ವೃತ್ತ, ಗಾಂಧಿನಗರ, ಜಯನಗರ, ಬಸವನಗುಡಿ, ಚಾಮರಾಜಪೇಟೆ, ಯಶವಂತಪುರ, ಜೆ.ಪಿ. ನಗರ ಮತ್ತು ಮತ್ತಿಕೆರೆ ಸೇರಿದಂತೆ ಇನ್ನಿತರೆ ಬಡಾವಣೆಗಳಲ್ಲಿ ನಿನ್ನೆ ತಡ ರಾತ್ರಿಯಿಂದ ಮಳೆಯಾಗುತ್ತಿದೆ.
ಮಳೆ ನೀರು ತಗ್ಗು ಪ್ರದೇಶಗಳ ಬಡಾವಣೆಗಳಲ್ಲಿದ್ದ ಅನೇಕ ಮನೆಗಳಿಗೆ ನುಗ್ಗಿದ್ದು, ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಜೊತೆಗೆ ರಸ್ತೆಗಳಲ್ಲಿ ಹಾಗೂ ಅಂಡರ್‌ಪಾಸ್ ಕೆಳಗೆ ಸಹ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.