ಕರ್ನಾಟಕ

karnataka

ಶಾಹೀನ್ ಚಂಡಮಾರುತ: ರಾಜ್ಯದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

By

Published : Oct 5, 2021, 7:45 PM IST

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಮತ್ತೆ ಮಳೆ ಅಬ್ಬರ ಆರಂಭವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ವ್ಯಾಪಕ ಮಳೆ ಬೀಳಲಿದೆ. ಹೀಗಾಗಿ, ನಗರದಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ.

rain
ಮಳೆ

ಬೆಂಗಳೂರು: ಶಾಹೀನ್ ಚಂಡಮಾರುತದ ಪರಿಣಾಮ ರಾಜ್ಯಾದ್ಯಂತ ಇನ್ನೂ ಮೂರು ದಿನ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಹಾಗೂ ನಾಳೆ ಆರೆಂಜ್​ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ನಾಳೆ ಆರೆಂಜ್ ನೀಡಲಾಗಿದೆ.

ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ ಮತ್ತು ಚಿತ್ರದುರ್ಗ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಬೀದರ್‌, ವಿಜಯಪುರ, ರಾಯಚೂರು, ಯಾದಗಿರಿ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಾಳೆ (ಅಕ್ಟೋಬರ್ 6) ರಂದು ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ರಾಜಧಾನಿಯಲ್ಲೂ ಮಳೆ:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಮತ್ತೆ ಮಳೆ ಅಬ್ಬರ ಆರಂಭವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ವ್ಯಾಪಕ ಮಳೆ ಬೀಳಲಿದೆ. ಹೀಗಾಗಿ ನಗರದಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ನೈಋತ್ಯ ಮುಂಗಾರು ಅಂತ್ಯವಾಗಿದೆ. ಆದರೆ, ಚಂಡಮಾರುತದ ಪ್ರಭಾವದಿಂದ ಇನ್ನೂ ಎರಡು ದಿನಗಳ ಕಾಲ ಮಳೆ ಸುರಿಯಲಿದೆ. ಅಕ್ಟೋಬರ್ 5 ಮತ್ತು 6 ರಂದು ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಓದಿ:ರಾಷ್ಟ್ರಪತಿ ಪ್ರವಾಸ: ಬಿಳಿಗಿರಿರಂಗನ ಬೆಟ್ಟಕ್ಕೆ 2 ದಿನ ನಿರ್ಬಂಧ, ವಾಯುಸೇನೆಯಿಂದ ಭದ್ರತೆ ಪರಿಶೀಲನೆ

ABOUT THE AUTHOR

...view details