ಬೆಂಗಳೂರು :ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆಯು ಮುಂದಿನ 3 ದಿನಗಳವರೆಗೆ ಮುಂದುವರೆಯಲಿದೆ.
ಶನಿವಾರ ಬೆಳಗ್ಗೆಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಇಂದಿನಿಂದ ಅಕ್ಟೋಬರ್ 12ರವರೆಗೆ ವ್ಯಾಪಕ ಮಳೆ ಬೀಳುವ ಹಿನ್ನೆಲೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಅಕ್ಟೋಬರ್ 9ರಂದು ಯೆಲ್ಲೋ ಅಲರ್ಟ್ ಇರಲಿದೆ. ಇಂದು ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದ್ದರೆ, ಕಲಬುರಗಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಲ್ಲಿ ಅ. 13ರವರೆಗೆ ವರ್ಷಧಾರೆ:
ಇಂದು ಬೆಳಗ್ಗೆಯಿಂದಲೇ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಅಕ್ಟೋಬರ್ 13ರವರೆಗೆ ಮುಂದುವರೆಯಲಿದೆ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ. ಶನಿವಾರ ಬೆಳಗ್ಗೆಯಿಂದ ನಗರದಲ್ಲಿ ಸರಾಸರಿ 8.4 ಮಿ.ಮೀ ಮಳೆಯಾಗಿದೆ.
ನಾಳೆ, ನಾಡಿದ್ದು ಸಹ ಇದೇ ವಾತಾವರಣ ಮುಂದುವರೆಯಲಿದೆ. ಅದರಲ್ಲೂ ಅಕ್ಟೋಬರ್ 12 ಮತ್ತು 13ರಂದು ಹೆಚ್ಚಿನ ಮಳೆಯಾಗಲಿದೆ. ಈ ಹಿನ್ನೆಲೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಅಡಿಗ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಅಭ್ಯರ್ಥಿ ಹೈಜಾಕ್ ಮಾಡುವ ಅಗತ್ಯ ನಮಗಿಲ್ಲ, ಪಕ್ಷಕ್ಕೆ ಬರುವವರನ್ನು ಬೇಡ ಎನ್ನಲ್ಲ : ಹೆಚ್‌ಡಿಕೆಗೆ ಡಿಕೆಶಿ ತಿರುಗೇಟು