ಕರ್ನಾಟಕ

karnataka

ETV Bharat / state

ವಾಯುಭಾರ ಕುಸಿತ: ಇಂದು, ನಾಳೆ ಕರ್ನಾಟಕದ 16 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ - ಕರ್ನಾಟಕದಲ್ಲಿ ಮಳೆ ಸುದ್ದಿ

ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದಲ್ಲಿ ಅಕ್ಟೋಬರ್ 17 ರವರೆಗೂ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Karnataka Rain news
ವಾಯುಭಾರ ಕುಸಿತ

By

Published : Oct 16, 2021, 12:52 PM IST

ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದಲ್ಲಿ ಅಕ್ಟೋಬರ್ 17ರವರೆಗೂ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಧಾರವಾಡ, ಬೆಳಗಾವಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ ಸೇರಿ ಒಟ್ಟು 16 ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯಲ್ಲೋ ಅಲರ್ಟ್(Yellow Alert) ಘೋಷಿಸಲಾಗಿದೆ.

ಮನೆಗೆ ನುಗ್ಗಿದ ಮಳೆ ನೀರು:

ವಾಯುಭಾರ ಕುಸಿತದ ಎಫೆಕ್ಟ್​ನಿಂದ ನಿನ್ನೆ ಸಂಜೆ ಕೂಡ ರಾಜಧಾನಿಯಲ್ಲಿ ಧಾರಾಕಾರ ಮಳೆ ಸುರಿದಿತ್ತು. ವರುಣನ ಆರ್ಭಟಕ್ಕೆ ನಗರದ ಹೆಚ್.ಎಸ್.ಆರ್ ಲೇಔಟ್ ಚರಂಡಿಗಳು ತುಂಬಿ ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿದೆ.

ABOUT THE AUTHOR

...view details