ಕರ್ನಾಟಕ

karnataka

ETV Bharat / state

ಕೊರೊನಾದಂತಹ ವೈರಾಣುಗಳಿಂದ ರಕ್ಷಣೆ ಪಡೆಯಲು ಯೋಗ ಮುಖ್ಯ: ಡಿ.ವಿ. ಸದಾನಂದಗೌಡ - D.V. Sadananda Gowda

ಮಾನವ ಜನಾಂಗದ ಏಳ್ಗೆಗಾಗಿ ಭಾರತ ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆ ಯೋಗ. ವೈರಾಣುಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಯೋಗ ತುಂಬಾನೇ ಸಹಕಾರಿ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ಡಿವಿ ಸದಾನಂದಗೌಡ
ಡಿವಿ ಸದಾನಂದಗೌಡ

By

Published : Jun 21, 2020, 5:33 PM IST

ನವದೆಹಲಿ/ಬೆಂಗಳೂರು: ಕೊರೊನಾದಂತಹ ವೈರಾಣುಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಯೋಗ ತುಂಬಾನೇ ಸಹಕಾರಿ. ನಮ್ಮ ಯೋಗಾಭ್ಯಾಸ ಇವತ್ತೊಂದೇ ದಿನಕ್ಕೆ ಸೀಮಿತವಾಗದೇ ಜೀವನದ ಅವಿಭ್ಯಾಜ್ಯ ಅಂಗವಾಗಲಿ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ಮಾನವ ಜನಾಂಗದ ಏಳ್ಗೆಗಾಗಿ ಭಾರತ ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆ ಯೋಗ. 2014ರ ಸೆಪ್ಟೆಂಬರ್‌ 27ರಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಯಲ್ಲಿ ಯೋಗದ ಮಹತ್ವವನ್ನು ತಿಳಿಸಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಸ್ತಾವನೆಯನ್ನು ಮಂಡಿಸಿದ್ದರು. ಪರಿಣಾಮವಾಗಿ 2015ರ ಜೂನ್‌ 21ರಂದು ಮೊಟ್ಟಮೊದಲ ಬಾರಿಗೆ ಅಂತರ್​​ರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಇಂದು ವಿಶ್ವದ ಬಹುತೇಕ ದೇಶಗಳಲ್ಲಿ ಈ ದಿನವನ್ನು ಯೋಗ ದಿನವಾಗಿ ಆಚರಿಸಲಾಗುತ್ತಿದೆ. ಭಾರತವು ಇದರ ನೇತೃತ್ವವಹಿಸಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತಕ್ಕೆ ಸಂದ ಗೌರವ ಇದಾಗಿದೆ. ಯೋಗವು ಬರೀ ಆಸನ, ಪ್ರಾಣಾಯಾಮ, ಸೂರ್ಯನಮಸ್ಕಾರ, ವ್ಯಾಯಾಮವಲ್ಲ. ಬದಲಿಗೆ ಜನರು ದೈಹಿಕವಾಗಿ, ಮಾನಸಿಕವಾಗಿ ಸ್ವಾಸ್ಥ್ಯ ಜೀವನ ನಡೆಸಲು ಇರುವ ಸಮಗ್ರ ಸಾಧನವಾಗಿದೆ. ವಿಶ್ವದ ಇಂದಿನ ಕಾಲಘಟ್ಟದಲ್ಲಿ ಯೋಗವು ಹಿಂದೆಂದಿಗಿಂತಲೂ ಪ್ರಸ್ತುತವಾಗಿದೆ. ಯೋಗಾಭ್ಯಾಸದಿಂದ ನಮ್ಮ ಒಟ್ಟಾರೆ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ. ಮಾನಸಿಕ ಒತ್ತಡವನ್ನು ನಿಯಂತ್ರಣಕ್ಕೆ ತರಬಹುದು. ಪ್ರಾಣಾಯಾಮದಿಂದ ಶ್ವಾಸಕೋಶ ಬಲಗೊಳ್ಳುತ್ತದೆ ಎಂದರು.

ABOUT THE AUTHOR

...view details